ತ್ಯಾಜ್ಯ ನೀರು ಸಂಸ್ಕರಣಾ ಘಟಕ ಸ್ಥಾಪನೆಗೆ ಕ್ರಮ: ಜಿಲ್ಲಾಧಿಕಾರಿ ಸುನೀಲ್ಕುಮಾರ್

ಕೊಪ್ಪಳ 24: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ (ಕೆ.ಕೆ.ಆರ್.ಡಿ.ಬಿ) ಅನದಾನದಲ್ಲಿ ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ತ್ಯಾಜ್ಯ ನೀರು ಸಂಸ್ಕರಣಾ ಘಟಕ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಅವರು ಹೇಳಿದರು.

ಅವರು ಶನಿವಾರದಂದು (ನ.23) ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ತ್ಯಾಜ್ಯ ನೀರು ಸಂಸ್ಕರಣಾ ಘಟಕ ಸ್ಥಾಪನೆ ಕುರಿತು ಸ್ಥಳ ಪರಿಶೀಲಿಸಿ ಮಾತನಾಡಿದರು.

ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ಒಳಚರಂಡಿ ವ್ಯವಸ್ಥೆ ಹಾಗೂ ತ್ಯಾಜ್ಯ ನೀರು ಸಂಸ್ಕರಣಾ ಘಟಕವನ್ನು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ 2019-20ನೇ ಸಾಲಿನ ರೂ. 200.00 ಲಕ್ಷಗಳ ಮ್ಯಾಕ್ರೋ ಅನುದಾನದಲ್ಲಿ ನಿರ್ಮಿ ಸಲಾಗುವುದು.  ಆಸ್ಪತ್ರೆಯ ವೈದ್ಯಕೀಯ ಹಾಗೂ ಇತರೆ ತ್ಯಾಜ್ಯದ ಸಂಸ್ಕರಣೆ ಮಾಡಲು ಎನ್.ಇ.ಬಿ.ಆರ್. ತಾಂತ್ರಿಕತೆಯ ಎಸ್.ಟಿ.ಪಿ/ ಇ.ಟಿ.ಪಿ ಯನ್ನು ಅಗತ್ಯಕ್ಕೆ ತಂಕ್ಕಂತೆ ಪ್ರತಿನಿತ್ಯ 250 ಕೆ.ಎಲ್.ಡಿ ತ್ಯಾಜ್ಯ ನೀರನ್ನು ಸಂಸ್ಕರಿಸುವ ಸಾಮಾಥ್ರ್ಯಕ್ಕೆ ನಿರ್ಮಿಸಲು ಉದ್ದೇಶಿಸಲಾಗಿದೆ.  ಸಂಸ್ಕರಿಸಿದ ನೀರನ್ನು ಆಸ್ಪತ್ರೆಯ ಆವರಣದಲ್ಲಿರುವ ಉದ್ಯಾನವನ ಅಥವಾ ಗಿಡಗಳಿಗೆ ಒದಗಿಸುವ ವ್ಯವಸ್ಥೆಯನ್ನು ಮಾಡಲಾಗುವುದು.  ಈ ಯೋಜನೆಯನ್ನು ಶೀಘ್ರ ಪ್ರಾರಂಭಿಸಿ ಬರುವ ಆಗಸ್ಟ್ ತಿಂಗಳ ಒಳಗಾಗಿ ಪೂರ್ಣಗೊಳಿಸಲು ಉದ್ದೇಶಿಸಿದೆ ಎಂದರು.

ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ 100 ಹಾಸಿಗೆಯುಳ್ಳ ಮಹಿಳಾ ಮತ್ತು ಮಕ್ಕಳ ವಿಶೇಷ ಚಿಕಿತ್ಸಾ (ಡಬ್ಲ್ಯೂ&ಸಿ ಸ್ಪೇಶಲ್ ಹಾಸ್ಪಿಟಲ್) ಆಸ್ಪತ್ರೆ ನಿರ್ಮಾಣದ ಕುರಿತು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಅವರು ಸ್ಥಳ ಪರಿಶೀಲನೆ ನಡೆಸಿದರು.  ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ದಾನರೆಡ್ಡಿ ಸೇರಿದಂತೆ ಕನರ್ಾಟಕ ಜಲಮಂಡಳಿ ಅಧಿಕಾರಿಗಳು ಹಾಗೂ ಆಸ್ಪತ್ರೆಯ ವೈದ್ಯಾಧಿಕಾರಿಗಳು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.