ದೋಷರಹಿತ ಮತದಾರರ ಪಟ್ಟಿ ಸಿದ್ಧಪಡಿಸಲು ರಾಜಕೀಯ ಪಕ್ಷಗಳ ಸಕ್ರಿಯ ಸಹಕಾರ ಅಗತ್ಯ: ಜಿಲ್ಲಾಧಿಕಾರಿ
Active cooperation of political parties is essential to prepare an error-free electoral roll: Deputy
ಲೋಕದರ್ಶನ ವರದಿ
ವಿಜಯಪುರ 21 : ದೋಷರಹಿತ ಹಾಗೂ ಪಾರದರ್ಶಕ ಮತದಾರರ ಪಟ್ಟಿ ಸಿದ್ಧಪಡಿಸುವಲ್ಲಿ ವಿವಿಧ ರಾಜಕೀಯ ಪಕ್ಷಗಳು ಮತ್ತು ಸಾರ್ವಜನಿಕರು ಸಹಕರಿಸಬೇಕೆಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಅವರು ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ಉತ್ತಮವಾಗಿ ನಡೆಯುತ್ತಿದೆ. ಯಾವುದೇ ಗೊಂದಲಗಳಿಲ್ಲದೆ ನಿಖರವಾದ ಮತದಾರರ ಪಟ್ಟಿ ತಯಾರಿಸಲು ರಾಜಕೀಯ ಪಕ್ಷಗಳ ಸಹಕಾರ ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.
ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಹಾಗೂ ದೋಷ ಸರಿಪಡಿಸುವ ನಿಟ್ಟಿನಲ್ಲಿ ಎಲ್ಲರೂ ಜವಾಬ್ದಾರಿಯಿಂದ ಕೆಲಸ ಮಾಡಬೇಕು. ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಪ್ರಗತಿಯಲ್ಲಿದ್ದು, ಬಿ.ಎಲ್.ಓ.ಗಳು ಮನೆ ಮನೆಗೆ ಭೇಟಿ ನೀಡಿ ನಿಖರ ಮಾಹಿತಿ ಸಂಗ್ರಹಿಸುತ್ತಿದ್ದು, ರಾಜಕೀಯಕ ಪಕ್ಷಗಳ ಏಜೆಂಟರು ಸೂಕ್ತ ಸಹಕಾರ ನೀಡಬೇಕು. ಎಸ್.ಐ.ಆರ್ ನೋಂದಣಿಯ ಮಹತ್ವ ಸಾರಲು ಸಭೆಗಳನ್ನಷ್ಟೆ ಅಲ್ಲದೆ ಶಾಲೆ-ಕಾಲೇಜುಗಳು ಸೇರಿದಂತೆ ವಿವಿಧ ಜಾಗೃತಿ ಅಭಿಯಾನಗಳನ್ನು ಹಮ್ಮಿಕೊಳ್ಳಲಾಗಿದೆ. ಮತಗಟ್ಟೆವಾರು ಮತದಾರರ ಪಟ್ಟಿಯನ್ನು ರಾಜಕೀಯ ಪಕ್ಷಗಳಿಗೆ ನೀಡಲಾಗಿದೆ. ಚುನಾವಣಾ ಆಯೋಗದ ನಿರ್ದೇಶನದಂತೆ ಈ ಕಾರ್ಯಕ್ಕೆ ತಮ್ಮ ಸಹಕಾರ ಅಗತ್ಯ. ಎಂದು ಜಿಲ್ಲಾಧಿಕಾರಿಗಳು ರಾಜಕೀಯ ಪ್ರತಿನಿಧಿಗಳಿಗೆ ಮನವಿ ಮಾಡಿದರು.
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ 