ಬೆಳಗಾವಿ: 22 : ಜಿಲ್ಲೆಯ ಎಲ್ಲ ನಗರ ಮತ್ತು ಗ್ರಾಮೀಣ ಪ್ರದೇಶ ಒಟ್ಟಾರೆ 53 ಲಕ್ಷ ಜನಸಂಖ್ಯೆಯ ಮನೆ-ಮನೆಗೆ ಭೇಟಿ ನೀಡಿ ಕ್ಷಯರೋಗ ತಪಾಸಣೆ ಮಾಡುವ ಗುರಿಯನ್ನು ಇಟ್ಟುಕೊಳ್ಳಲಾಗಿದೆ. ಈ ಆಂದೋಲನದಲ್ಲಿ ಬೆಳಗಾವಿ ಜಿಲ್ಲೆಯ ಪ್ರತಿಶತ 100% ರಷ್ಟು ಜನಸಂಖ್ಯೆಯನ್ನು ತಲುಪಿ ಕ್ಷಯರೋಗ ತಪಾಸಣೆ ಮಾಡುವ ಗುರಿ ಇಟ್ಟುಕೊಳ್ಳಲಾಗಿದ್ದು, ಸಾರ್ವಜನಿಕರು ಸದುಪಯೋಗ ಪಡೆಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ.ಎಸ್.ಬಿ ಬೊಮ್ಮನಹಳ್ಳಿ ಅವರು ಹೇಳಿದರು.
ಜಿಲ್ಲೆಯಾದ್ಯಂತ ಕ್ಷಯರೋಗ ಪತ್ತೆ ಅಭಿಯಾನವನ್ನು ನವೆಂಬರ್ 25 ರಿಂದ ಡಿಸೆಂಬರ್ 10 ರವರೆಗೆ ಆಯೋಜಿಸಲಾಗಿದ್ದು, ಈ ಹಿನ್ನಲೇಯಲ್ಲಿ ಶುಕ್ರವಾರ(ನ.22) ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಸಕ್ರೀಯ ಕ್ಷಯರೋಗ ಪತ್ತೆ ಆಂದೋಲನದ ಪ್ರಚಾರ ಸಾಮಗ್ರಿಗಳನ್ನು (ಐ.ಇ.ಸಿ) ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿಗಳಾದ ಡಾ.ರಾಜೇಂದ್ರ ಕೆ. ವಿ ಅವರು ಮಾತನಾಡಿ, ಕೇಂದ್ರ ಸಕರ್ಾರ ಹಾಗೂ ರಾಜ್ಯ ಸಕರ್ಾರವು ಭಾರತವನ್ನು ಕ್ಷಯಮುಕ್ತಗೊಳಿಸುವ ನಿಟ್ಟಿನಲ್ಲಿ ಭಾರತದಾದ್ಯಂತ ಕ್ಷಯಮುಕ್ತ ಸಮಾಜಕ್ಕಾಗಿ
ಆಂದೋಲನವನ್ನು ಹಮ್ಮಿಕೊಂಡಿದು, ಇದಕ್ಕಾಗಿ ಜಿಲ್ಲೆಯಾದ್ಯಾಂತ 7636 ನುರಿತ ಆರೋಗ್ಯ ಸಹಾಯಕರು ಹಾಗೂ ಆಶಾ, ಅಂಗನವಾಡಿ ಕಾರ್ಯಕತರ್ೆಯರು ಹಾಗೂ ಸ್ವಯಂ ಸೇವಕರನ್ನೊಳಗೊಂಡ ತಂಡಗಳನ್ನು ರಚಿಸಿ, ಪ್ರತಿ ತಂಡವು ಈ ಅವಧಿಯಲ್ಲಿ ಪ್ರತಿದಿನ 20 ರಿಂದ 30 ಮನೆಗಳನ್ನು ಭೇಟಿ ಮಾಡಿ ಕುಟುಂಬದ ಎಲ್ಲ ಸದಸ್ಯರಿಗೆ ಕ್ಷಯರೋಗ ಕುರಿತು ಜಾಗೃತಿ ಮೂಡಿಸಲಾಗುತ್ತದೆ.
ಕ್ಷಯರೋಗದ ಲಕ್ಷಣಗಳುಳ್ಳ ಕುಟುಂಬದ ಸದಸ್ಯರ ಕಫವನ್ನು ಸ್ಥಳದಲ್ಲಿಯೇ ಸಂಗ್ರಹಿಸಿ ತಪಾಸಣೆಗೆ ನಿಯೋಜಿತ ಕಫ ತಪಾಸಣಾ ಕೇಂದ್ರಕ್ಕೆ ಕಳುಹಿಸಿ, ತಪಾಸಿಸಿ ಕ್ಷಯರೋಗವಿದ್ದದು ಕಂಡು ಬಂದಲ್ಲಿ ಸ್ಥಳದಲ್ಲಿಯೇ ಉಚಿತವಾಗಿ ಚಿಕಿತ್ಸೆಯನ್ನು ನೀಡಲಾಗುವುದು. ಅದಲ್ಲದೇ ಜಿಲ್ಲೆಯ ಎಲ್ಲಾ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಉಚಿತ ಕ್ಷ-ಕಿರಣ ತಪಾಸಣೆ ವ್ಯವಸ್ಥೆ ಮಾಡಿ ಸಂಶಯಾಸ್ಪದ ರೋಗಿಗಳ ಕ್ಷ-ಕಿರಣ ತಪಾಸಣೆ ಮಾಡಲಾಗುವುದು. ಹಾಗೂ ಕ್ಷ-ಕಿರಣ ಪರಿಕ್ಷೇಯಲ್ಲಿ ವಿಪರೀತ ಪಲಿತಾಂಶ ಬಂದ ಸಂಶಯಾಸ್ಪದ ಕ್ಷಯರೋಗಿಗಳಿಗೆ ಸಿಬಿನ್ಯಾಟ್ (ತ್ವರಿತ ಕ್ಷಯರೋಗ ತಪಾಸಣಾ ಯಂತ್ರ) ಸೌಲಭ್ಯವನ್ನು ಜಿಲ್ಲೆಯ ಅಥಣಿ, ಗೋಕಾಕ, ಚಿಕ್ಕೋಡಿ, ಸವದತ್ತಿ ಹಾಗೂ ಬೆಳಗಾವಿ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಕಲ್ಪಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಕ್ರೀಯ ಕ್ಷಯರೋಗ ಪತ್ತೆ ಆಂದೋಲನದ ಐ.ಇ.ಸಿ. ಸಾಮಗ್ರಿಗಳನ್ನು ಬಿಡುಗಡೆಗೊಳಿಸಿದರು.
ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಾದ ಲಕ್ಷ್ಮಣ ನಿಂಬರಗಿ, ಜಿಲ್ಲೆಯ ಆರೋಗ್ಯ ಇಲಾಖೆಯ ಅಧಿಕಾರಿಗಳು, ಅಂಗನವಾಡಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.