ಬೆಂಗಳೂರು,ಮೇ 14. ಜಿಟ್ ಟ್ರೈನರ್ ಗಳಿಗೆ ಹಾಗೂ ಜಿಮ್ ಗಳನ್ನು ತೆರೆಯಲು ಅವಕಾಶ ನೀಡುವ ರಾಜ್ಯ ಸರ್ಕಾರದ ಕ್ರಮಕ್ಕೆ ನಟ ದುನಿಯಾ ವಿಜಯ್ ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.ಜಿಮ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಟ್ರೈನರ್ಗಳಿಗೆ ಲಾಕ್ಡೌನ್ನಿಂದ ಆರ್ಥಿಕ ಸಂಕಷ್ಟ ಎದುರಾಗಿದ್ದು ಜೀವನ ನಡೆಸಲೂ ಕಷ್ಟಸಾಧ್ಯ ವಾಗಿದೆ.ಜಿಮ್ಗಳನ್ನು ತೆರೆಯಲು ಸರ್ಕಾರ ಅವಕಾಶ ಮಾಡಿಕೊಡಬೇಕೆಂದು ಸ್ಯಾಂಡಲ್ವುಡ್ ನಟ ದುನಿಯಾ ವಿಜಯ್ ಅವರು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದ್ದರು.ಈ ಮನವಿ ಸ್ಪಂದಿಸಿರುವ ಯಡಿಯೂರಪ್ಪ ಸರ್ಕಾರ ಸಕರಾತ್ಮಕವಾಗಿ ನಿರ್ಧಾರ ತೆಗೆದುಕೊಂಡಿರುವುದಕ್ಕೆ ದುನಿಯಾ ವಿಜಯ್ ಅವರು ಸಿಎಂ ಧನ್ಯವಾದಗಳನ್ನು ಟ್ವಟಿರ್ನಲ್ಲಿ ತಿಳಿಸಿದ್ದಾರೆ.ಮೇ 18 ರಂದು ಜಿಮ್ ತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿದೆ ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ವೊಂದನ್ನು ಹಂಚಿಕೊಂಡಿದ್ದಾರೆ.
ಕೊರೊನಾ ವೈರಸ್ ಪ್ರಸರಣ ತಡೆಯಲು ಘೋಷಿಸಿರುವ ಲಾಕ್ಡೌನ್ನಿಂದಾಗಿ ಎಲ್ಲಾ ವ್ಯಾಪಾರ ವಹಿವಾಟು ಬಂದಾ ಗಿದೆ.ಇದರಿಂದಾಗಿ ಸಾರ್ವಜನಿಕರಿಗೆ ವ್ಯಾಪಾರಸ್ಥರಿಗೆ, ಕೂಲಿ ಕಾರ್ಮಿಕರಿಗೆ,ಜಿಮ್ ಟ್ರೈನರ್ಗಳಿಗೆ ಹೀಗೆ ಇತ್ಯಾದಿ ಕ್ಷೇತ್ರ ಗಳ ಕಾರ್ಮಿಕರು ಜೀವನ ನಡೆಸಲು ಸಾಕಷ್ಟು ಕಷ್ಟಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ ಹಾಗೂ ಕ್ರೀಡಾ ಸಚಿವರಿಗೆ ಮನವಿ ಸಲ್ಲಿಸಿದ್ದರು.ಈ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವುದು ಹಾಗೂ ಮೇ 17ರ ಬಳಿಕ ಲಾಕ್ ಡೌನ್ ಸಡಿಲಿಕೆ ವೇಳೆ ಅವಕಾಶ ಕಲ್ಪಿಸುವುದಾಗಿ ತಿಳಿಸಿದ್ದರು.