ಕನ್ನಡಿಗರ ಕೆಂಗಣ್ಣಿಗೆ ಗುರಿಯಾದ ನಟ ಕಮಲ್ ಹಾಸನ್ ಹೇಳಿಕೆ
Actor Kamal Haasan's statement has angered Kannadigas
ಬೆಂಗಳೂರು 28: ಇತ್ತೀಚೆಗೆ ಚೆನ್ನೈನಲ್ಲಿ ನಡೆದ ಮಣಿರತ್ನಂ ನಿರ್ದೇಶನದ, ಕಮಲ್ ಹಾಸನ್ ಅಭಿನಯದ 'ಥಗ್ ಲೈಫ್' ಚಿತ್ರವು ಚಿತ್ರದ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮದಲ್ಲಿ ಕಮಲ್ ಹಾಸನ್ ನೀಡಿದ್ದ ಹೇಳಿಕೆ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ.
ಕನ್ನಡ
ತಮಿಳಿನಿಂದ ಹುಟ್ಟಿರುವುದು ಎಂದು ಕಮಲ್ ಹಾಸನ್ ಹೇಳಿಕೆ ನೀಡಿದ್ದರು. ಹಾಸನ್ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಸಿಎಂ ಸಿದ್ದರಾಮಯ್ಯ, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ
ಸೇರಿದಂತೆ ಅನೇಕ ರಾಜಕೀಯ ನಾಯಕರು ಖಂಡಿಸಿದ್ದಾರೆ.
ಕಮಲ್
ಹಾಸನ್ ಅವರಿಗೆ ಕನ್ನಡದ ಇತಿಹಾಸದ ಬಗ್ಗೆ ಅರಿವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದರೆ, ತಮ್ಮ ಮಾತೃಭಾಷೆಯನ್ನು ವೈಭವೀಕರಿಸುವ ಪ್ರಯತ್ನದಲ್ಲಿ ಕನ್ನಡವನ್ನು ಅಗೌರವ ಮಾಡಿರುವುದು ಸರಿಯಲ್ಲ, ಹೇಳಿಕೆ ಸಂಬಂಧ ಕಮಲ್ ಕ್ಷಮೆಯಾಚಿಸಬೇಕು ಎಂದು ಬಿ.ವೈ.ವಿಜಯೇಂದ್ರ
ಒತ್ತಾಯಿಸಿದ್ದಾರೆ.
ಮತ್ತೊಂದೆಡೆ,
ಕನ್ನಡ ಪರ ಸಂಘಟನೆಗಳು ರಾಜ್ಯದಾದ್ಯಂತ
ಚಿತ್ರದ ಪೋಸ್ಟರ್ಗಳನ್ನು ಹರಿದು ಹಾಕುವ ಮೂಲಕ ಕಮಲ್ ಹಾಸನ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಬಹಿಷ್ಕಾರದ ಕೂಗು ಹೆಚ್ಚಾಗಿದ್ದು, ಕನ್ನಡ ರಕ್ಷಣಾ ವೇದಿಕೆ ಸದಸ್ಯರು ರಾಜ್ಯದಲ್ಲಿ 'ಥಗ್ ಲೈಫ್' ಚಿತ್ರದ ಬಿಡುಗಡೆಗೆ ಅವಕಾಶ ನೀಡಬಾರದು, ನಿಷೇಧಿಸಬೇಕೆಂದು ಅಧಿಕಾರಿಗಳನ್ನು ಒತ್ತಾಯಿಸುತ್ತಿದ್ದಾರೆ. ಕನ್ನಡ ಪರ ಸಂಘಟನೆಗಳು 'ಥಗ್
ಲೈಫ್' ಚಿತ್ರದ ಪೋಸ್ಟರ್ಗಳನ್ನು ಹರಿದು ಹಾಕುತ್ತಿರುವ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.
ಥಗ್
ಲೈಫ್ ಜೂನ್ 5ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 