ʼಥಗ್ ಲೈಫ್ʼ ರಿಲೀಸ್‌ಗಾಗಿ ಹೈಕೋರ್ಟ್ ಮೆಟ್ಟಿಲೇರಿದ ನಟ ಕಮಲ್ ಹಾಸನ್
Actor Kamal Haasan moves High Court for release of 'Thug Life'
ಬೆಂಗಳೂರು 06: ಕನ್ನಡ ಭಾಷೆಯ ಬಗ್ಗೆ ಮಾತನಾಡಿ, ಹಿರಿಯ ನಟ ಕಮಲ್ ಹಾಸನ್ ವಿವಾದದಲ್ಲಿ ಸಿಲುಕಿದ್ದಾರೆ.
ಇತ್ತೀಚೆಗೆ
ಸಿನಿಮಾದ ಕಾರ್ಯಕ್ರಮದಲ್ಲಿ ಕಮಲ್ ಹಾಸನ್ ಅವರು ʼʼಕನ್ನಡ ಹುಟ್ಟಿದ್ದು, ತಮಿಳಿನಿಂದ” ಎಂದು ಮಾತನಾಡಿದ್ದರು. ಕನ್ನಡದ ಶಿವರಾಜ್ ಕುಮಾರ್ ಮುಂದೆಯೇ ಈ ಮಾತನ್ನು ಆಡಿದ್ದರು.
ಅವರ
ಹೇಳಿಕೆಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಇದರಿಂದ ʼಥಗ್ ಲೈಫ್ʼ ಸಿನಿಮಾಕ್ಕೆ ಸಂಕಷ್ಟ ಎದುರಾಗಿದೆ. 300 ಕೋಟಿ ರೂ. ನಿರ್ಮಾಣದ ಸಿನಿಮಾ ರಿಲೀಸ್‌ಗೆ ದಿನಗಣನೆ ಇರುವಾಗಲೇ
ಈ ವಿವಾದ ಹುಟ್ಟಿರುವುದು ಚಿತ್ರತಂಡಕ್ಕೆ ಸಂಕಷ್ಟ ತಂದಿಡುವ ಸಾಧ್ಯತೆಯಿದೆ.
ಕಮಲ್
ಹಾಸನ್ ಕನ್ನಡಿಗರಲ್ಲಿ ಕ್ಷಮೆ ಕೇಳದೆ ಇದ್ರೆ, ಅವರ ʼಥಗ್ ಲೈಫ್ʼ ಸಿನಿಮಾವನ್ನು ರಿಲೀಸ್
ಮಾಡಲು ಬಿಡುವುದಿಲ್ಲವೆಂದು, ಈ ವಿಚಾರದಲ್ಲಿ ಫಿಲಂ
ಚೇಂಬರ್ ಖಡಕ್
ಎಚ್ಚರಿಕೆಯನ್ನು ನೀಡಿದೆ. ಆದರೆ ಇದುವರೆಗೆ ಕಮಲ್ ಹಾಸನ್ ಕ್ಷಮೆ ಕೇಳಿಲ್ಲ.
ಇದೀಗ
ಕರ್ನಾಟಕದಲ್ಲಿ ʼಥಗ್ ಲೈಫ್ʼ ಸಿನಿಮಾಕ್ಕೆ ಎದುರಾಗಿರುವ ಸಂಕಷ್ಟ ಪರಿಹಾರಕ್ಕೆ ನಿರ್ಮಾಣ ಸಂಸ್ಥೆ ಹೈಕೋರ್ಟ್ ಮೊರೆ ಹೋಗಿದೆ.
ಕಮಲ್ ಹಾಸನ್ ಒಡೆತನದ ರಾಜ್ ಕಮಲ್ ಫಿಲ್ಮ್ಸ್ ಇಂಟರ್ ನ್ಯಾಷನಲ್ ʼಥಗ್ ಲೈಫ್ʼ ಸಿನಿಮಾ ಬಿಡುಗಡೆಗೆ ಅವಕಾಶ ನೀಡಬೇಕೆಂದು ಹೈಕೋರ್ಟ್ ಮೊರೆ ಹೋಗಿದೆ.
ವಾಣಿಜ್ಯ
ಮಂಡಳಿ ಕ್ರಮ ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸಿದ್ದು, ಕಮಲ್ ಹಾಸನ್ ಹೇಳಿಕೆಗೆ, ಚಿತ್ರಕ್ಕೂ ಸಂಬಂಧವಿಲ್ಲ. ಸಿಬಿಎಫ್ ಸಿನಿಂದ ಚಿತ್ರಕ್ಕೆ ಪ್ರಮಾಣ ಪತ್ರವನ್ನು ಪಡೆಯಲಾಗಿದೆ. ಚಿತ್ರ ರಿಲೀಸ್‌ಗೆ ವಾಣಿಜ್ಯ ಮಂಡಳಿ
ನಿರ್ಬಂಧ ಹೇರುತ್ತಿರುವುದು ಸರಿಯಲ್ಲ. ಸಿನಿಮಾ ಬಿಡುಗಡೆಗೆ ಅವಕಾಶ ಕಲ್ಪಿಸಬೇಕೆಂದು ಅರ್ಜಿಯಲ್ಲಿ ಹೇಳಲಾಗಿದೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 