ಚೆನ್ನೈ, ಡಿ 17: ಸಂಸತ್ತಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಮಸೂದೆ ಅಂಗೀಕಾರಕ್ಕೆ ಸಂಬಂಧಿಸಿ ನಟ, ರಾಜಕಾರಣಿ ಹಾಗೂ ಮಕ್ಕಳ್ ನೀದಿ ಮಯ್ಯಮ್ ಸಂಸ್ಥಾಪಕ ಕಮಲ್ ಹಾಸನ್ ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರದಲ್ಲಿರುವ ಎಐಎಡಿಎಂದಕೆ ಸರ್ಕಾರವನ್ನು ಖಂಡಿಸಿದ್ದಾರೆ.
ತಮ್ಮ ಪಕ್ಷ ಪೌರತ್ವ ತಿದ್ದುಪಡಿ ಕಾಯ್ದೆಯ ಜತೆಗೆ ರಾಷ್ಟ್ರೀಯ ನಾಗರಿಕ ನೋಂದಣಿಯನ್ನೂ ವಿರೋಧಿಸುತ್ತದೆ ಎಂದು ತಿಳಿಸಿದ್ದಾರೆ.
ಸುದ್ದಿಗಾರರೊಡನೆ ಈ ಕುರಿತು ಮಾತನಾಡಿದ ಕಮಲ್, ಪೌರತ್ವ ತಿದ್ದುಪಡಿ ಕಾಯ್ದೆಯಗೆ ಎಐಎಡಿಎಂಕೆ ಸದಸ್ಯರ ರಾಜ್ಯಸಭೆಯಲ್ಲಿ ಒಪ್ಪಿಗೆ ಸೂಚಿಸುವ ಮೂಲಕ ತಮಿಳರಿಗೆ ಮತ್ತು ದೇಶಕ್ಕೆ ದ್ರೋಹ ಬಗೆದಿದ್ದಾರೆ ಎಂದರು.
ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಒಂದು ದಿನದ ನಂತರ ನಟ ಕಮಲ್ ಹಾಸನ್ ತಮ್ಮ ಪಕ್ಷವು ಸಿಎಎ ಮತ್ತು ಎನ್ಆರ್ಸಿ ಎರಡನ್ನೂ ವಿರೋಧಿಸುತ್ತದೆ ಎಂದು ಹೇಳಿದ್ದಾರೆ.