ನಟ ಕೋಮಲ್ 'ತೆನಾಲಿ ಡಿಎ ಎಲ್.ಎಲ್.ಬಿ' ಚಿತ್ರಕ್ಕೆ ಅದ್ದೂರಿ ಮುಹೂರ್ತ
Actor Komal's 'Tenali DA L.L.B.'
ಲೋಕದರ್ಶನ ವರದಿ
ಸ್ಯಾಂಡಲ್‌ವುಡ್‌ನ ಕಾಮಿಡಿ ಸ್ಟಾರ್ ಕೋಮಲ್ ಕುಮಾರ್ ಮತ್ತೆ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಕೋಮಲ್ ನಟನೆಯ ಹೊಸ ಸಿನಿಮಾದ ಮುಹೂರ್ತ ಸಮಾರಂಭ ಅದ್ದೂರಿಯಾಗಿ ನೆರವೇರಿದೆ. ಇತ್ತೀಚಿಗಷ್ಟೇ ಕೋಮಲ್ ನಟನೆಯ ಹೊಸ ಸಿನಿಮಾ 'ತೆನಾಲಿ ಡಿಎ ಎಲ್.ಎಲ್.ಬಿ' ಚಿತ್ರದ ಫಸ್ಟ್ ಲುಕ್ ಮತ್ತು ಟೈಟಲ್ ರೀವೀಲ್ ಆಗಿತ್ತು. ಇದೀಗ ತೆನಾಲಿ ಚಿತ್ರ ಅದ್ದೂರಿಯಾಗಿ ಸೆಟ್ಟೇರಿದೆ. ಬೆಂಗಳೂರಿನ ವಿಜಯನಗರದ ಮನುವನ ಬಳಿ ಇರುವ ಆದಿಚುಂಚನಗಿರಿ ಮಠದಲ್ಲಿ ಸಿನಿಮಾದ ಮುಹೂರ್ತ ಸಮಾರಂಭ ನೆರವೇರಿದೆ. ಕೋಮಲ್ ಕುಮಾರ್ ಹೊಸ ಸಿನಿಮಾಗೆ ಅಣ್ಣ, ಹಿರಿಯ ನಟ ಜಗ್ಗೇಶ್ ಅವರು ಕ್ಲಾಪ್ ಮಾಡಿ ಶುಭಹಾರೈಸಿದರು. ವಿಶೇಷ ಎಂದರೆ ಆದಿಚುಂಚನಗಿರಿ ಸ್ವಾಮಿಗಳಾದ ನಿರ್ಮಲಾನಂದ ಮಹಾಸ್ವಾಮೀಜಿ ಕೂಡ ಚಿತ್ರತಂಡಕ್ಕೆ ಶುಭಹಾರೈಸಿದರು.
ಇನ್ನು ಸಿನಿಮಾದ ಟೈಟಲೇ ಹೇಳುವ ಹಾಗೆ ನಟ ಕೋಮಲ್ ಕುಮಾರ್ ಈ ಸಿನಿಮಾದಲ್ಲಿ ಲಾಯರ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ನಿಜ ಜೀವನದಲ್ಲೂ ಎಲ್.ಎಲ್.ಬಿ ಓದಿರುವ ಕೋಮಲ್ ಸಿನಿಮಾದಲ್ಲೂ ಕರಿ ಕೋಟು ಹಾಕಿ ಮಿಂಚಲಿದ್ದಾರೆ. ಮುಹೂರ್ತ ಬಳಿಕ ಅಣ್ಣ, ನಟ ಜಗ್ಗೇಶ್ ಅವರು ತಮ್ಮ ಕೋಮಲ್‌ಗೆ ಕಪ್ಪು ಕೋಟು ಗಿಫ್ಟ್ ಆಗಿ ನೀಡಿದರು. ಬಳಿಕ ಮಾತನಾಡಿದ ನಟ ಜಗ್ಗೇಶ್, ತಮ್ಮನ ಸಿನಿಮಾಗೆ ಶುಭಹಾರೈಸಿದರು. ಒಳ್ಳೆಯ ಕಂಟೆಂಟ್ ಇರುವ ಸಿನಿಮಾ ಇದಾಗಿದೆ ಎಂದು ಹೇಳಿದರು.
ನಟ ಕೋಮಲ್ ಅವರು ಮಾತನಾಡಿ, 'ಲಾಯರ್ ಆಗಬೇಕು ಎನ್ನುವುದು ನನ್ನ ತಂದೆಯ ಕನಸಾಗಿತ್ತು. ಈಗ ಸಿನಿಮಾದಲ್ಲಿ ಕರಿ ಕೋಟು ಧರಿಸಿ ಬರುತ್ತಿದ್ದೀನೆ, ಪಾತ್ರ ತುಂಬಾ ಚೆನ್ನಾಗಿದೆ' ಎಂದು ಹೇಳಿದರು. ಇನ್ನೂ ಕೋಮಲ್‌ಗೆ ನಾಯಕಿಯಾಗಿ ಕಾಜಲ್ ಕುಂದರ್ ಕಾಣಿಸಿಕೊಳ್ಳುತ್ತಿದ್ದಾರೆ. 'ಮೊದಲ ಬಾರಿಗೆ ಕೋಮಲ್ ಅವರ ಜೊತೆ ನಟಿಸುತ್ತಿದ್ದೇನೆ, ಪಾತ್ರದ ಬಗ್ಗೆ ಈಗಲೇ ಜಾಸ್ತಿ ಹೇಳಲು ಸಾಧ್ಯವಿಲ್ಲ' ಎಂದು ಹೇಳಿದರು. ಇನ್ನೂ ಈ ಸಿನಿಮಾದಲ್ಲಿ ಮತ್ತೋರ್ವ ನಟಿ ಅಕ್ಷಿತಾ ಬೋಪಯ್ಯ ಸಹ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರಕ್ಕೆ ನಿರ್ದೇಶಕ ಸಿದ್ದ್ರುವ್ ಸಿದ್ದು ಸೇರಿದಂತೆ ಸಂತೋಷ್ ಮಾಯಪ್ಪ, ಪ್ರದೀಪ್ ಕುಮಾರ್ ಮಹಾಲಿಂಗಯ್ಯ, ರೇಣುಕಾ ಪ್ರಸಾದ್ ಬಂಡವಾಳ ಹಾಕಿದ್ದಾರೆ. ರಿತ್ವಿಕ್ ಮುರಳಿಧರನ್ ಸಂಗೀತ ನಿರ್ದೇಶನ ಮಾಡುತ್ತಿದ್ದು ಉದಯ್ ಲೀಲಾ ಅವರ ಕ್ಯಾಮೆರಾ ವರ್ಕ್ ಸಿನಿಮಾಗಿರಲಿದೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 