ನಟ ಸೈಫ್‌ ಅಲಿ ಖಾನ್ ಗೆ ಚಾಕು ಇರಿತ: ಪ್ರಾಣಾಪಾಯದಿಂದ ಪಾರು

Actor Saif Ali Khan stabbed: narrowly escaped death

ಮುಂಬೈ 16: ಚಾಕು ಇರಿತಕ್ಕೆ ಒಳಗಾದ ಬಾಲಿವುಡ್‌ ನಟ ಸೈಫ್‌ ಅಲಿ ಖಾನ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಮುಂಬೈನ ಬಾಂದ್ರಾದಲ್ಲಿರುವ ಖಾನ್‌ ಅವರ ಮನೆಗೆ ಅಪರಿಚಿತ ವ್ಯಕ್ತಿಯೊಬ್ಬ ನುಗ್ಗಿ ಆರು ಬಾರಿ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಗುರುವಾರ ಬೆಳಗಿನ ಜಾವ 2.30ರ ಹೊತ್ತಿಗೆ ಘಟನೆ ನಡೆದಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿಲಾಗಿದೆ.

ಬೆನ್ನು ಮೂಳೆ ಬಳಿ ಚಾಕುವಿನಿಂದ ಇರಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಖಾನ್ ಅವರನ್ನು ನಗರದ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ‘ಖಾನ್‌ ಅವರ ದೇಹಕ್ಕೆ ಆರು ಬಾರಿ ಇರಿಯಲಾಗಿದೆ, ಎರಡು ಭಾಗಗಳಲ್ಲಿ ಆಳವಾಗಿ ಗಾಯಗಳಾಗಿವೆ. ತುರ್ತು ಶಸ್ತ್ರಚಿಕಿತ್ಸೆ ನಡೆಸಲಾಗಿದೆ, ಜೀವಕ್ಕೆ ಯಾವುದೇ ಅಪಾಯವಿಲ್ಲ. ಬೆನ್ನುಮೂಳೆಯಿಂದ ಚಾಕುವನ್ನು ಹೊರತೆಗೆಯಲು ಶಸ್ತ್ರಚಿಕಿತ್ಸೆ ನಡೆಸಲಾಯಿತು. ಖಾನ್ ಅವರ ಆರೋಗ್ಯ ಈಗ ಸ್ಥಿರವಾಗಿದೆ. ನಾಳೆ ಬೆಳಿಗ್ಗೆ ಅವರನ್ನು ಐಸಿಯುನಿಂದ ಹೊರತರುತ್ತೇವೆ’ ಎಂದು ಆಸ್ಪತ್ರೆಯ ಡಾ. ನಿತಿನ್‌ ಡಾಂಗೆ ತಿಳಿಸಿದ್ದಾರೆ.

ಪೊಲೀಸರು ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡು , ತನಿಖೆ ಆರಂಭಿಸಿದ್ದಾರೆ.