ಅತ್ಯುತ್ತಮ ನಟ ರಾಜ್ಯ ಪ್ರಶಸ್ತಿಯನ್ನು ನಿರಾಕರಿಸಿದ ನಟ ಸುದೀಪ್
Actor Sudeep refused the best actor state award
ಬೆಂಗಳೂರು: ‘ಪೈಲ್ವಾನ್’ ಚಿತ್ರಕ್ಕಾಗಿ ತಮಗೆ ಘೋಷಣೆಯಾಗಿದ್ದ 2019ನೇ ಸಾಲಿನ ಅತ್ಯುತ್ತಮ ನಟ ರಾಜ್ಯ ಪ್ರಶಸ್ತಿಯನ್ನು ನಟ ಕಿಚ್ಚ ಸುದೀಪ್ ನಿರಾಕರಿಸಿದ್ದಾರೆ.
ಕಿಚ್ಚ ಸುದೀಪ್ ಅವರು ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಈ ಪ್ರಶಸ್ತಿಯನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ. ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ಪ್ರಶಸ್ತಿಯನ್ನು ನಿರಾಕರಿಸುತ್ತಿರುವುದಕ್ಕೆ ರಾಜ್ಯ ಸರ್ಕಾರಕ್ಕೆ ಮತ್ತು ತಮ್ಮನ್ನು ಆಯ್ಕೆ ತೀರ್ಪುಗಾರರಿಗೆ ಕ್ಷಮೆ ಕೋರಿದ್ದಾರೆ.
'ಅತ್ಯುತ್ತಮ ನಟ ವಿಭಾಗದಲ್ಲಿ ರಾಜ್ಯ ಪ್ರಶಸ್ತಿಯನ್ನು ಪಡೆದಿರುವುದು ನಿಜಕ್ಕೂ ಹೆಮ್ಮೆಯ ವಿಚಾರ. ಈ ಪ್ರಶಸ್ತಿಗೆ ಆಯ್ಕೆ ಮಾಡಿದ್ದಕ್ಕಾಗಿ ಗೌರವಾನ್ವಿತ ತೀರ್ಪುಗಾರರಿಗೆ ನನ್ನ ಧನ್ಯವಾದಗಳು. ಆದರೆ, ನಾನು ಹಲವಾರು ವರ್ಷಗಳಿಂದ ಯಾವುದೇ ಪ್ರಶಸ್ತಿಗಳನ್ನು ಸ್ವೀಕರಿಸುತ್ತಿಲ್ಲ. ನನ್ನ ವೈಯಕ್ತಿಕ ಕಾರಣಗಳಿಂದಾಗಿ ನಾನು ಈ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ. ನನ್ನನ್ನು ಹೊರತುಪಡಿಸಿ ಅನೇಕ ಅರ್ಹ ನಟರು ಉತ್ತಮವಾಗಿ ಕೆಲಸ ಮಾಡಿದ್ದಾರೆ ಮತ್ತು ನನಗಿಂತ ಹೆಚ್ಚಾಗಿ ಅವರಿಗೇ ಈ ಪ್ರಶಸ್ತಿ ಸಿಗಬೇಕು. ಅವರಲ್ಲಿ ಒಬ್ಬರು ಇದನ್ನು ಸ್ವೀಕರಿಸುವುದನ್ನು ನೋಡುವುದು ನನಗೆ ಹೆಚ್ಚು ಸಂತೋಷ ನೀಡುತ್ತದೆ' ಎಂದಿದ್ದಾರೆ.
ಮುಂದುವರಿದು, ಜನರನ್ನು ರಂಜಿಸುವ ನನ್ನ ಕೆಲಸ ಯಾವಾಗಲೂ ಮುಂದುವರಿಯುತ್ತದೆ ಮತ್ತು ನಾನು ಯಾವುದೇ ಪ್ರಶಸ್ತಿಗಳ ನಿರೀಕ್ಷೆಯನ್ನು ಇಟ್ಟುಕೊಂಡಿಲ್ಲ. ತೀರ್ಪುಗಾರರು ನನ್ನನ್ನು ಆಯ್ಕೆ ಮಾಡಿರುವುದು ನಾನು ಮತ್ತಷ್ಟು ಉತ್ತಮವಾಗಿ ಕೆಲಸ ಮಾಡಲು ನನಗೆ ಉತ್ತೇಜನ ನೀಡುತ್ತದೆ ಎಂದು ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 