ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ ನಟಿ ಕತ್ರಿನಾ ಕೈಫ್

Actress Katrina Kaif visits Kukke Sri Subrahmanya Temple

ಮಂಗಳೂರು 11: ಬಾಲಿವುಡ್ ನಟಿ ಕತ್ರಿನಾ ಕೈಫ್ ಅವರು ಮಂಗಳವಾರ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ತನ್ನ ಸ್ನೇಹಿತೆಯರೊಂದಿಗೆ ದೇಗುಲಕ್ಕೆ ಭೇಟಿ ನೀಡಿದ ಕತ್ರಿನಾ, ಸರ್ಪ ಸಂಸ್ಕಾರ ಪೂಜೆ ನಡೆಸಿದ್ದಾರೆ.

ಮಂಗಳವಾರ ಮತ್ತು ಬುಧವಾರದಂದು ತಲಾ ನಾಲ್ಕರಿಂದ ಐದು ಗಂಟೆಗಳ ಕಾಲ ಎರಡು ಹಂತಗಳಲ್ಲಿ ಪೂಜೆಯನ್ನು ನಡೆಸಲಾಗುತ್ತದೆ.

ದೇವಸ್ಥಾನದ ವಿಐಪಿ ಅತಿಥಿ ಗೃಹದಲ್ಲಿ ಉಳಿದುಕೊಳ್ಳಲಿರುವ ಕತ್ರಿನಾ ಬುಧವಾರ ಮಧ್ಯಾಹ್ನ 2 ಗಂಟೆಯ ವೇಳೆಗೆ ಧಾರ್ಮಿಕ ಕ್ರಿಯೆಯನ್ನು ಪೂರ್ಣಗೊಳಿಸುವ ನಿರೀಕ್ಷೆಯಿದೆ.