ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಕೃತ್ಯ ಸಹಿಸಲಾಗದು: ರುದ್ರ್ಪ ಲಮಾಣಿ
Acts that hurt religious sentiments cannot be tolerated: Rudrappa Lamani
ಶಿಗ್ಗಾಂವಿ, ಆ. 28: ಯಾವುದೇ ಧರ್ಮದವರ ಭಾವನೆಗಳಿಗೆ ಧಕ್ಕೆ ತರುವಂತಹ ಕೃತ್ಯಗಳನ್ನು ಸಹಿಸಲು ಸಾಧ್ಯವಿಲ್ಲ. ತಪ್ಪಿತಸ್ಥರ ವಿರುದ್ಧ ಪೊಲೀಸರು ಸೂಕ್ತ ಕಾನೂನು ಕ್ರಮ ಕೈಗೊಂಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರುದ್ರ್ಪ ಲಮಾಣಿ ಹೇಳಿದರು.
ಪಟ್ಟಣದ ಟೆಂಪೋ ನಿಲ್ದಾಣದ ಬಳಿಯ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ, ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪವಿತ್ರ ಸ್ಥಳದಲ್ಲಿ ಇಂತಹ ಕೃತ್ಯ ನಡೆದಿರುವುದು ವಿಷಾದನೀಯ. ಘಟನೆಗೆ ಅನಗತ್ಯ ಪ್ರಚಾರ ನೀಡಬಾರದು ಎಂದು ಮನವಿ ಮಾಡಿದರು.
ಘಟನೆಗೆ ಸಂಬಂಧಿಸಿದ ವ್ಯಕ್ತಿಯು ಮಾನಸಿಕ ಅಸ್ವಸ್ಥನಾಗಿರುವುದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಘಟನೆಯನ್ನು ಉದ್ದೇಶಪೂರ್ವಕವಾಗಿ ನಡೆಸಿರುವ ಕೃತ್ಯವೆಂದು ಪರಿಗಣಿಸಬಾರದು. ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿರುವ ವ್ಯಕ್ತಿಯ ಬಗ್ಗೆ ಸೂಕ್ತ ಕಾಳಜಿ ವಹಿಸಬೇಕಿದ್ದು, ಅಗತ್ಯವಿದ್ದಲ್ಲಿ ಚಿಕಿತ್ಸೆ ಕೊಡಿಸುವ ಕ್ರಮ ಕೈಗೊಳ್ಳಬೇಕು ಎಂದರು.
ಅಹಿತಕರ ಘಟನೆಗಳಿಗೆ ಅವಕಾಶವಿಲ್ಲ
ಜಿಲ್ಲೆಯಲ್ಲಿ ಯಾವುದೇ ಅಹಿತಕರ ಅಥವಾ ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡುವುದಿಲ್ಲ. ಇಂತಹ ಘಟನೆಗಳು ಕಂಡುಬಂದಲ್ಲಿ ಸಾರ್ವಜನಿಕರು ನೇರವಾಗಿ ಅಧಿಕಾರಿಗಳ ಗಮನಕ್ಕೆ ತರಬೇಕು. ತಪ್ಪಿತಸ್ಥರ ವಿರುದ್ಧ ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.
ಎಲ್ಲ ಸಮುದಾಯದ ಜನರು ಸೌಹಾರ್ದತೆ ಹಾಗೂ ಸಹಬಾಳ್ವೆಯಿಂದ ಬದುಕಬೇಕು. ಸಮಾಜದಲ್ಲಿ ಶಾಂತಿ, ಸಾಮರಸ್ಯ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಘಟನೆಗೆ ಹೆಚ್ಚಿನ ಮಹತ್ವ ನೀಡುವ ಅಗತ್ಯವಿಲ್ಲ. ಘಟನೆಗೆ ಕಾರಣನಾದ ವ್ಯಕ್ತಿ ಮಾನಸಿಕ ಅಸ್ವಸ್ಥನೆಂದು ತಿಳಿದುಬಂದಿದ್ದು, ಉದ್ದೇಶಪೂರ್ವಕವಾಗಿ ಕೃತ್ಯ ಎಸಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ ಎಂದರು.
ಇದೇ ರೀತಿಯ ಘಟನೆ ಹಿಂದೆ ಹಾವೇರಿಯಲ್ಲಿಯೂ ನಡೆದಿತ್ತು. ಮಾನಸಿಕ ಅಸ್ವಸ್ಥನೊಬ್ಬ ಮಹಾತ್ಮ ಗಾಂಧೀಜಿ ಪುತ್ಥಳಿಗೆ ಹಾನಿ ಮಾಡಿದ್ದ ಸಂದರ್ಭದಲ್ಲಿ ಪ್ರಕರಣ ದಾಖಲಿಸಲಾಗಿತ್ತು. ನ್ಯಾಯಾಲಯದ ಪ್ರಕ್ರಿಯೆಯ ಬಳಿಕ ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುವಂತೆ ಸೂಚಿಸಲಾಗಿತ್ತು ಎಂದು ಸಚಿವ ರುದ್ರ್ಪ ಲಮಾಣಿ ಹೇಳಿದರು.
ಶಾಸಕ ಯಾಸೀರ್ ಅಹ್ಮದ್ಖಾನ್ ಪಠಾಣ್, ಗಡಿ ಪ್ರಾಧಿಕಾರದ ಅಧ್ಯಕ್ಷ ಸೋಮನಗೌಡ ಬೆವಿನಮರದ, ಜಿಲ್ಲಾ ಕೆಡಿಪಿ ಸಮಿತಿ ಸದಸ್ಯ ಶಂಭು ಆಜೂರ, ಶಂಕರಗೌಡ ಪಾಟೀಲ್, ಅಣ್ಣಪ್ಪ ಲಮಾಣಿ, ಗೌಸ್ಖಾನ್ ಮುನಶಿ, ವಸಂತ ಬಾಗೂರ್, ಮುನ್ನಾ ಲಕ್ಷ್ಮೇಶ್ವರ, ಮಹಾಂತೇಶ ಸಾಳಿ, ಶಂಭು ನೇತ್ರಿ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 