ಅಡರಕಟ್ಟಿ - ಬಟ್ಟೂರು ರಸ್ತೆ ಸಿಸಿ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ

ಅಡರಕಟ್ಟಿ - ಬಟ್ಟೂರು ರಸ್ತೆ ಸಿಸಿ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ  Adarakatti - Battur road Bhoomipuja for construction of CC road


ಅಡರಕಟ್ಟಿ 17: ತಾಲ್ಲೂಕಿನ ಅಡರಕಟ್ಟಿ ಗ್ರಾಮದಿಂದ ಬಟೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯನ್ನು ಸಿಸಿ ರಸ್ತೆಯಾಗಿ ನಿರ್ಮಿಸುವ ಕಾಮಗಾರಿಗೆ ಶಾಸಕ ಡಾ. ಚಂದ್ರು ಲಮಾಣಿ ಅವರು ಗ್ರಾಮಸ್ಥರೊಂದಿಗೆ ಭೂಮಿಪೂಜೆ ನೆರವೇರಿಸಿದರು.  

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಅಡರಕಟ್ಟಿ - ಬಟ್ಟೂರು ಸಂಪರ್ಕ ರಸ್ತೆ ಬಹುದಿನಗಳಿಂದ ಸಂಪೂರ್ಣ ಹದಗೆಟ್ಟಿದ್ದು, ಇದರಿಂದ ಗ್ರಾಮಸ್ಥರು ತೊಂದರೆ ಅನುಭವಿಸುತ್ತಿದ್ದರು. ರಸ್ತೆ ಅಭಿವೃದ್ಧಿಪಡಿಸುವಂತೆ ಗ್ರಾಮಸ್ಥರು ಹಲವು ಬಾರಿ ಮನವಿ ಮಾಡಿದ್ದರು. ಅವರ ಒತ್ತಾಯದ ಮೇರೆಗೆ ಇದೀಗ ಸಿಸಿ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಗಿದೆ ಎಂದರು.  

ರಸ್ತೆ ಕಾಮಗಾರಿಯನ್ನು ಗುತ್ತಿಗೆದಾರರು ಗುಣಮಟ್ಟದಿಂದ ಹಾಗೂ ತ್ವರಿತವಾಗಿ ಪೂರ್ಣಗೊಳಿಸಬೇಕು. ಗ್ರಾಮಸ್ಥರು ಸಹಕರಿಸಿ ಕಾಮಗಾರಿ ಶೀಘ್ರ ಪೂರ್ಣಗೊಳ್ಳಲು ನೆರವಾಗಬೇಕು ಎಂದು ಅವರು ಮನವಿ ಮಾಡಿದರು.  

ಈ ಸಂದರ್ಭದಲ್ಲಿ ಅಡರಕಟ್ಟಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಶಾಂತ ಮಾಡಳ್ಳಿ, ಸುನಿಲ್ ಮಹಾಂತಶೆಟ್ಟರ, ನಿಂಗಪ್ಪ ಬನ್ನಿ, ಗಂಗಾಧರ ಮೆಣಸಿನಕಾಯಿ, ಬಸವರಾಜ ಚಕ್ರಸಾಲಿ, ವಿಜಯ ಕುಂಬಾರ, ಪ್ರವೀಣ ಬೊಮ್ಮಲೆ, ನಿಂಗಪ್ಪ ರೊಳ್ಳಿ, ಮಹಾಂತೇಶ ಶಿರಹಟ್ಟಿ, ನವೀನ ಹಿರೇಮಠ, ಮಂಜು ಗಜಕೋಶ, ವಿನಾಯಕ ಶಿರಹಟ್ಟಿ, ಗುತ್ತಿಗೆದಾರ ಈಶ್ವರ ಬಾಣವತ ಸೇರಿದಂತೆ ಗ್ರಾಮಸ್ಥರು ಹಾಗೂ ಮುಖಂಡರು ಉಪಸ್ಥಿತರಿದ್ದರು.