ವ್ಯಸನ ಮುಕ್ತ ದಿನಾಚರಣೆ: ಡಾ. ಮಹಾಂತ ಶಿವಯೋಗಿ ಸ್ವಾಮೀಜಿ ಭಾವಚಿತ್ರಕ್ಕೆ ಜಿಲ್ಲಾಧಿಕಾರಿಗಳಿಂದ ಪುಷ್ಪ ನಮನ

ವ್ಯಸನ ಮುಕ್ತ ದಿನಾಚರಣೆ: ಡಾ. ಮಹಾಂತ ಶಿವಯೋಗಿ ಸ್ವಾಮೀಜಿ ಭಾವಚಿತ್ರಕ್ಕೆ ಜಿಲ್ಲಾಧಿಕಾರಿಗಳಿಂದ ಪುಷ್ಪ ನಮನ  Addiction-Free Day: Deputy Commissioner pays floral tribute to the portrait of Dr. Mahanta Shivayogi

ಲೋಕದರ್ಶನ ವರದಿ 

ವಿಜಯನಗರ (ಹೊಸಪೇಟೆ)   01: ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಮಧ್ಯಪಾನ ಸಂಯಮ ಮಂಡಳಿ ಸಹಯೋಗದಲ್ಲಿ ಶನಿವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಡಾ. ಮಹಾಂತ ಶಿವಯೋಗಿ ಸ್ವಾಮೀಜಿ ಅವರ ಜನ್ಮ ದಿನಾಚರಣೆ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆಯನ್ನು ಆಚರಿಸಲಾಯಿತು.  ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್‌. ಮನ್ನಿಕೇರಿ ಹಾಗೂ ಅಪರ ಜಿಲ್ಲಾಧಿಕಾರಿ ಈ. ಬಾಲಕೃಷ್ಣ ಅವರು ಡಾ. ಮಹಾಂತ ಶಿವಯೋಗಿ ಸ್ವಾಮೀಜಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ವಾರ್ತಾ ಸಹಾಯಕ ಅಧಿಕಾರಿ ಸುರೇಶ್ ಹಿರೇಮಠ, ವಾರ್ತಾ ಇಲಾಖೆಯ ಸಿಬ್ಬಂದಿ ಕೃಷ್ಣಸ್ವಾಮಿ, ತಾಯೇಶ್, ಕಾಟೇಶ್, ಪಂಪಾಪತಿ ಸೇರಿದಂತೆ ಜಿಲ್ಲಾಧಿಕಾರಿಗಳ ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.