ಆಗಸ್ಟ್ 1ರಂದು ವ್ಯಸನಮುಕ್ತ ದಿನಾಚರಣೆ: ಡಾ. ಮಹಾಂತ ಶಿವಯೋಗಿಗಳ ಸೇವೆ ಸ್ಮರಣೆ
Addiction-Free Day Observance on August 1: Commemorating the Service of Dr. Mahanta Shivayogi
ಲೋಕದರ್ಶನ ವರದಿ
ಬಳ್ಳಾರಿ 31: ದೇಶ-ವಿದೇಶಗಳಲ್ಲಿ ಸಂಚರಿಸಿ ಜನರಲ್ಲಿ ವ್ಯಸನಮುಕ್ತಿಯ ಅರಿವು ಮೂಡಿಸಿದ ಪೂಜ್ಯ ಡಾ. ಮಹಾಂತ ಶಿವಯೋಗಿಗಳ ಜನ್ಮದಿನವಾದ ಆಗಸ್ಟ್ 1 ಅನ್ನು ರಾಜ್ಯಾದ್ಯಂತ ವ್ಯಸನಮುಕ್ತ ದಿನಾಚರಣೆಯಾಗಿ ಆಚರಿಸಲಾಗುತ್ತಿದೆ.
1930ರ ಆಗಸ್ಟ್ 1ರಂದು ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹಿಪ್ಪರಗಿ ಗ್ರಾಮದಲ್ಲಿ ಜನಿಸಿದ ಡಾ. ಮಹಾಂತ ಶಿವಯೋಗಿಗಳು ಬಾಲ್ಯದಲ್ಲೇ ವಿರಕ್ತ ಮಠದ ಕಿರಿಯ ಸ್ವಾಮೀಜಿಗಳಾದರು.
ಕಾಶಿಯಲ್ಲಿ ಸಂಸ್ಕೃತ, ಹಿಂದಿ, ಯೋಗ ಹಾಗೂ ಶಾಸ್ತ್ರೀಯ ಸಂಗೀತದಲ್ಲಿ ಶಿಕ್ಷಣ ಪಡೆದ ಅವರು, ಉತ್ತರ ಕರ್ನಾಟಕದಲ್ಲಿ ಬರಗಾಲ ಉಂಟಾದ ಸಂದರ್ಭದಲ್ಲಿ ಗಂಜಿ ಕೇಂದ್ರಗಳು, ಗೋಶಾಲೆಗಳು ಹಾಗೂ ಜನೋಪಯೋಗಿ ಸೇವಾ ಕಾರ್ಯಗಳನ್ನು ನಡೆಸಿದರು.
1970ರಲ್ಲಿ ಚಿತ್ತರಗಿಯ ಶ್ರೀ ವಿಜಯ ಮಹಾಂತೇಶ್ವರ ಸಂಸ್ಥಾನ ಮಠದ 19ನೇ ಪೀಠಾಧಿಪತಿಯಾಗಿ ಅಧಿಕಾರ ವಹಿಸಿಕೊಂಡ ಅವರು ಸುಮಾರು ಐದು ದಶಕಗಳ ಕಾಲ ಅನ್ನದಾಸೋಹ, ವಚನ ಮಂಗಳ, ದೇವದಾಸಿ ಪುನರ್ವಸತಿ, ನಿರುದ್ಯೋಗಿಗಳಿಗೆ ನೆರವು, ನೈಸರ್ಗಿಕ ಚಿಕಿತ್ಸಾ ಕೇಂದ್ರಗಳ ಸ್ಥಾಪನೆ ಸೇರಿದಂತೆ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ರೂಪಿಸಿದರು.
1975ರಿಂದ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕಾಗಿ ಆರಂಭಿಸಿದ ‘ಮಹಾಂತ ಜೋಳಿಗೆ’ ಅಭಿಯಾನವು ರಾಜ್ಯದಾದ್ಯಂತ ವಿಶಿಷ್ಟ ಜನಜಾಗೃತಿ ಮೂಡಿಸಿತು. ಮದ್ಯಪಾನ, ತಂಬಾಕು ಸೇರಿದಂತೆ ಎಲ್ಲ ರೀತಿಯ ದುಶ್ಚಟಗಳನ್ನು ತ್ಯಜಿಸುವಂತೆ ಜನರಲ್ಲಿ ಜಾಗೃತಿ ಮೂಡಿಸಿದ ಅವರು,
ಜಾತಿ-ಮತ ಭೇದವಿಲ್ಲದೆ ದೇಶ ಹಾಗೂ ವಿದೇಶಗಳಲ್ಲಿಯೂ ಅಭಿಯಾನ ನಡೆಸಿದರು. ಅವರ ಕಾರ್ಯದಿಂದ ಲಕ್ಷಾಂತರ ಮಂದಿ ವ್ಯಸನಗಳಿಂದ ಮುಕ್ತರಾಗಿ ಕುಟುಂಬಗಳಲ್ಲಿ ನೆಮ್ಮದಿ ಕಂಡಿದ್ದಾರೆ.
ಡಾ. ಮಹಾಂತ ಶಿವಯೋಗಿಗಳ ಜನ್ಮದಿನವನ್ನು ವ್ಯಸನಮುಕ್ತ ದಿನಾಚರಣೆಯಾಗಿ ಆಚರಿಸುವ ಮೂಲಕ ಯುವಜನರಲ್ಲಿ ವ್ಯಸನದ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಿ, ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಪ್ರೇರಣೆ ನೀಡಲಾಗುತ್ತಿದೆ.
ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ವತಿಯಿಂದ ಆಗಸ್ಟ್ 1ರಂದು ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಜ್ಞಾ ಸ್ವೀಕಾರ, ಜಾಗೃತಿ ಕಾರ್ಯಕ್ರಮಗಳು ಹಾಗೂ ಜಯಂತಿ ಆಚರಣೆಗಳನ್ನು ಹಮ್ಮಿಕೊಳ್ಳಲಾಗಿದೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 