ಡಾ. ಮಹಾಂತ ಶಿವಯೋಗಿಗಳ ಜನ್ಮದಿನ ಅಂಗವಾಗಿ ಆಗಸ್ಟ್‌ 1ರಂದು ವ್ಯಸನಮುಕ್ತ ದಿನಾಚರಣೆ

ಡಾ. ಮಹಾಂತ ಶಿವಯೋಗಿಗಳ ಜನ್ಮದಿನ ಅಂಗವಾಗಿ ಆಗಸ್ಟ್‌ 1ರಂದು ವ್ಯಸನಮುಕ್ತ ದಿನಾಚರಣೆ  Addiction-Free Day to be observed on August 1st to mark the birth anniversary of Dr. Mahanta Shivayo

ಲೋಕದರ್ಶನ ವರದಿ 

ಹಾವೇರಿ, ಜು. 20: ಡಾ. ಮಹಾಂತ ಶಿವಯೋಗಿಗಳ ಜನ್ಮದಿನದ ಅಂಗವಾಗಿ ಆಗಸ್ಟ್‌ 1ರಂದು ಜಿಲ್ಲೆಯಲ್ಲಿ ವ್ಯಸನಮುಕ್ತ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ ಎಲ್‌. ಅಧಿಕಾರಿಗಳಿಗೆ ಸೂಚಿಸಿದರು.  

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆಗಸ್ಟ್‌ 1ರಂದು ಬೆಳಿಗ್ಗೆ 10 ಗಂಟೆಗೆ ಜಾಗೃತಿ ಜಾಥಾ ಹಾಗೂ 11 ಗಂಟೆಗೆ ಹಾವೇರಿ ನಗರದ ಗಾಂಧಿಭವನದಲ್ಲಿ ಮುಖ್ಯ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು.  

ಕಾಲೇಜು ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ ನಡೆಸಬೇಕು. ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲೂ ಕಾರ್ಯಕ್ರಮಗಳನ್ನು ಸಮರ​‍್ಕವಾಗಿ ಆಯೋಜಿಸಬೇಕು. ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಾಪಂ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಕಾರ್ಯಕ್ರಮಗಳನ್ನು ನಡೆಸುವಂತೆ ಸೂಚಿಸಿದರು.  

ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಉಪನ್ಯಾಸಗಳನ್ನು ಆಯೋಜಿಸಬೇಕು. ಡಾ. ಮಹಾಂತ ಶಿವಯೋಗಿಗಳ ಜೀವನ ಹಾಗೂ ಆದರ್ಶಗಳ ಕುರಿತು ಉಪನ್ಯಾಸಕರನ್ನು ಆಹ್ವಾನಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.  

ಸಭೆಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕಿ ಶ್ರೀಮತಿ ಭಾರತಿ ಎಚ್‌. ಕಾರ್ಯಕ್ರಮದ ರೂಪರೇಷೆಗಳ ಕುರಿತು ಮಾಹಿತಿ ನೀಡಿದರು.  ಸಭೆಯಲ್ಲಿ ಗ್ರಾಮೀಣ ಪೊಲೀಸ್ ಇಲಾಖೆಯ ಸಿಪಿಐ ಸಿದ್ದಾರೂಢ ಬಡಿಗೇರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಉಮೇಶ್ ಕರಮುಡಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.