ವ್ಯಸನ ಮತ್ತು ಒತ್ತಡ ನಿರ್ವಹಣೆ ಜಾಗೃತಿ ಕಾರ್ಯಕ್ರಮ
ಲೋಕದರ್ಶನ ವರದಿ
ಕಾಗವಾಡ 25: ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿರುವ ಒತ್ತಡ ಮತ್ತು ವ್ಯಸನದ ಸಮಸ್ಯೆಗಳನ್ನು ತಡೆಗಟ್ಟಲು ಮತ್ತು ವಿದ್ಯಾರ್ಥಿಗಳಲ್ಲಿ ಮಾನಸಿಕ ಆರೋಗ್ಯದ ಬಗ್ಗೆ ಸಕಾರಾತ್ಮಕ ಮನೋಭಾವವನ್ನು ಬೆಳೆಸುವ ಉದ್ದೇಶದಿಂದ ಮಹಾರಾಷ್ಟ್ರದ ಮಿರಜ್ ಪಟ್ಟಣದ ನಿರ್ಮಲ ಫೌಂಡೇಶನ್ ವತಿಯಿಂದ ಸಾವಂತವಾಡಿ ಪಟ್ಟಣದ ವಿದ್ಯಾವಿಕಾಸ ಅಧ್ಯಾಯಕ ವಿದ್ಯಾಲಯದಲ್ಲಿ ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಇತ್ತಿಚಿಗೆ ಆಯೋಜಿಸಲಾಗಿತ್ತು.
ನಿರ್ಮಲ್ ಫೌಂಡೇಶನ್‌ನ ಡಾ. ದೀಪಕ್ ಮುಕಾದಮ್ಮ ವಿದ್ಯಾರ್ಥಿಗಳೊಂದಿಗೆ ನೇರವಾಗಿ ಸಂವಾದ ನಡೆಸಿ, ವ್ಯಸನವು ವ್ಯಕ್ತಿಯ ಜೀವನವನ್ನು ಕ್ರಮೇಣ ಹೇಗೆ ನಿಯಂತ್ರಿಸುತ್ತದೆ. ಒತ್ತಡವು ನಮ್ಮ ಆರೋಗ್ಯದ ದಕ್ಷತೆಯನ್ನು ಹೇಗೆ ಕಡಿಮೆ ಮಾಡುತ್ತದೆ. ಹಾಗೂ ಸರಿಯಾದ ಮಾನಸಿಕ ಅಭ್ಯಾಸಗಳನ್ನು ಅಳವಡಿಸಿಕೊಳ್ಳುವ ಮೂಲಕ ಈ ಎರಡೂ ಅಪಾಯಗಳನ್ನು ಹೇಗೆ ತಪ್ಪಿಸಬಹುದು ಎಂಬುದರ ಕುರಿತು ಪರಿಣಾಮಕಾರಿಯಾಗಿ ಮಾರ್ಗದರ್ಶನ ಮಾಡಿದ ಅವರು, ಮೊಬೈಲ್ ವ್ಯಸನ, ಹೆಚ್ಚುತ್ತಿರುವ ಸ್ಕ್ರೀನ್ ಸಮಯ ಮತ್ತು ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮದ ಪ್ರಭಾವದಂತಹ ಪ್ರಮುಖ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸಿದರು. ವ್ಯಸನ ಮುಕ್ತ ಸಮಾಜವನ್ನು ಸೃಷ್ಟಿಸಲು ಯುವಕರು ಮುಂದಾಗಬೇಕೆಂದು ಮನವಿ ಮಾಡಿದರು.
ಈ ವೇಳೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಹೆಚ್ಚಿನ ಉತ್ಸಾಹದಿಂದ ಭಾಗವಹಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 