ಬೆಂಗಳೂರು, ಮೇ 31,ಬಹುದಿನಗಳಿಂದ ನೆನೆಗುದಿಗೆ ಬಿದ್ದಿರುವ ತಳವಾರ, ಪರಿವಾರ, ಸಿದ್ಧಿ ಜನಾಂಗವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲಾಗಿದೆ.ಈ ಕುರಿತು ಗಜೆಟ್ ಅಧಿಸೂಚನೆ ಜಾರಿಯಾಗಿದ್ದು, ಪರಿಶಿಷ್ಟ ಪಂಗಡಗಳ ಸಂವಿಧಾನ ತಿದ್ದುಪಡಿ ಕಾಯ್ದೆ 2020ರ ರ ಅನ್ವಯ ಪರಿಷ್ಕೃತ ಪಟ್ಟಿಯಲ್ಲಿ ತಳವಾರ ಮತ್ತು ಪರಿವಾರ ಹಾಗೂ ಸಿದ್ಧಿ ಜನಾಂಗವನ್ನು ಪ್ರತ್ಯೇಕವಾಗಿ ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರಿಸಲಾಗಿದೆ. ಸರ್ಕಾರದ ಈ ಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು, ಹಿಂದುಳಿದ ಈ ಸಮುದಾಯಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿದ ಪ್ರಧಾನಿ ನರೇಂದ್ರಮೋದಿ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಾಮಾಜಿಕ ನ್ಯಾಯ ದೊರಕಿಸಿಕೊಟ್ಟಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.