ತಾಳಿಕೋಟಿ ಪಟ್ಟಣದಲ್ಲಿ ಚಡ್ಡಿ ಗ್ಯಾಂಗ್ ಕಳ್ಳರ ಹಾವಳಿ ಸ್ಥಳಕ್ಕೆ ಅಡಿಷನಲ್ ಎಸ್ಪಿ ರಾಮನಗೌಡ ಹಟ್ಟಿ ಭೇಟಿ
Additional SP Ramanagouda Gowda Hatti visits the spot where the Chaddi gang is operating in Talikoti
ತಾಳಿಕೋಟಿ 26: ಕಳೆದೆರಡು ದಿನಗಳ ಹಿಂದೆ ಪಟ್ಟಣದ ಗಣೇಶ ನಗರದಲ್ಲಿ ಆರು ಜನ ಚಡ್ಡಿ ಗ್ಯಾಂಗ್ ಕಳ್ಳರು ಕಳ್ಳತನ ಎಸೆಗಲು ವಿಫಲ ಪ್ರಯತ್ನ ನಡೆಸಿದ ಘಟನೆಗೆ ಸಂಬಂಧಿಸಿ ಶುಕ್ರವಾರ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ(ಅ.ವಿ.) ಗಳಾದ ರಾಮನಗೌಡ ಹಟ್ಟಿ ಅವರು ಭೇಟಿ ನೀಡಿ ಪರೀಶೀಲನೆ ನಡೆಸಿದರು. ಆರಂಭದಲ್ಲಿ ಸ್ಥಳೀಯ ಪೊಲೀಸ್ ಠಾಣಾ ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದುಕೊಂಡ ಅವರು ಗಣೇಶ್ ನಗರಕ್ಕೆ ಭೇಟಿ ನೀಡಿ ಅಲ್ಲಿನ ನಿವಾಸಿಗಳಿಂದ ಮಾಹಿತಿ ಕಲೆ ಹಾಕಿ ನಂತರ ಅವರಿಗೆ ಅಗತ್ಯ ಮಾರ್ಗದರ್ಶನ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಬಡಾವಣೆಗಳಲ್ಲಿ ಅತಿ ಹೆಚ್ಚು ಆರ್ಥಿಕವಾಗಿ ಒಳ್ಳೆಯ ಸ್ಥಿತಿಯಲ್ಲಿಯೇ ಇರುವವರು ಇರುವುದರಿಂದ ಪ್ರತಿ ಮನೆಗೂ ಸಿಸಿ ಕ್ಯಾಮೆರಾ ಅಳವಡಿಸಿಕೊಳ್ಳಬೇಕು ಹಾಗೂ ಬಡಾವಣೆಯ ಪ್ರಮುಖ ಸ್ಥಳಗಳಲ್ಲಿಯೂ ಸಿ ಸಿ ಕ್ಯಾಮೆರಾ ಗಳನ್ನು ಅಳವಡಿಸಬೇಕು, ತಮ್ಮಲ್ಲಿರುವ ಬಂಗಾರದ ಒಡವೆಗಳು ದೊಡ್ಡ ಪ್ರಮಾಣದ ನಗದು ಹಣ ಮನೆಗಳಲ್ಲಿ ಇಡದೆ ಅಗತ್ಯವಿದ್ದಷ್ಟು ಇಟ್ಟು ಸುರಕ್ಷತೆ ದೃಷ್ಟಿಯಿಂದ ಇನ್ನುಳಿದಿದ್ದನ್ನು ಬ್ಯಾಂಕಿನಲ್ಲಿ ಇಡಬೇಕು, ತಮ್ಮ ಕೆಲಸ ಕಾರ್ಯಗಳ ನಿಮಿತ್ತ ಪಟ್ಟಣ ಬಿಟ್ಟು ಹೊರಗಡೆ ಹೋಗುವರು ಹೋಗುವ ಪೂರ್ವ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಇದರ ಜೊತೆಗೆ ರಾತ್ರಿಯಲ್ಲಿ ಗಸ್ತು ಮಾಡುವ ಪೊಲೀಸರೊಂದಿಗೆ ಅಗತ್ಯವಿದ್ದಾಗ ಸಹಕರಿಸಬೇಕು ಎಂದು ತಿಳಿಸಿದ ಅವರು ಯಾವ ಕಾರಣಕ್ಕೂ ಭಯಪಡುವ ಅಗತ್ಯವಿಲ್ಲ ಇಲಾಖೆ ನಿಮ್ಮ ಜೊತೆಯಲ್ಲಿರುವುದು ನಮ್ಮೊಂದಿಗೆ ಸಹಕರಿಸಿ ಎಂದರು.
ಈ ಸಮಯದಲ್ಲಿ ಸಿಪಿಐ ಮೊಹಮ್ಮದ್ ಫಸಿವುದ್ದೀನ, ಪಿಎಸ್‌ಐ ಜ್ಯೋತಿ ಖೋತ್,ಅ.ವಿ.ಪಿಎಸ್‌ಐ ಆರ್.ಎಸ್.ಭಂಗಿ, ಸಿಬ್ಬಂದಿಗಳಾದ ಎಂ.ಎಲ್.ಪಟ್ಟೇದ, ಸಿದ್ದನಗೌಡ ದೊಡ್ಡಮನಿ ಹಾಗೂ ಬಡಾವಣೆಯ ನಿವಾಸಿಗಳು ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 