ಯಲ್ಲಮ್ಮದೇವಿ ಗುಡ್ಡಕ್ಕೆ ಹೆಚ್ಚುವರಿ ಬಸ್ಸ್ ಸಂಚಾರ
Additional bus service to Yallammadevi Hill
ಚಿಕ್ಕೋಡಿ 26: ದಿ. 31. ರಿಂದ ದಿ. 07ರವರೆಗೆ ಸವದತ್ತಿಯ ಶ್ರೀ.ಯಲ್ಲಮ್ಮಾ ದೇವಿ ಜಾತ್ರೆಯು ಜರುಗಲಿದ್ದು, ಜಾತ್ರೆಗೆ ಗೋಕಾಕ-ಘಟಪ್ರಭಾ-ಅಥಣಿ-ಕಾಗವಾಡ-ನಿಪ್ಪಾಣಿ- ರಾಯಬಾಗ ಮುಂತಾದ ಸ್ಥಳಗಳಿಂದ ಶ್ರೀ.ಕ್ಷೇತ್ರ ಸವದತ್ತಿ ಯಲ್ಲಮ್ಮನಗುಡ್ಡ ಹಾಗೂ ಜೋಗುಳಬಾವಿ ವರೆಗೆ ಪ್ರಯಾಣಿಸುವ ಯಾತ್ರಿಕರಿಗೆ ಚಿಕ್ಕೋಡಿ ವಿಭಾಗದ ಗೋಕಾಕ-ರಾಯಬಾಗ-ಅಥಣಿ-ನಿಪ್ಪಾಣಿ ಘಟಕಗಳಿಂದ ವಿಶೇಷ ಹೆಚ್ಚುವರಿ ಬಸ್ಸುಗಳ ವ್ಯವಸ್ಥೆ ಕಲ್ಪಿಸಲಾಗುವುದು.
ಗೋಕಾಕ ಬಸ್ ನಿಲ್ದಾಣದಲ್ಲಿ ಹಾಗೂ ಶ್ರೀ.ಯಲ್ಲಮ್ಮದೇವಿ ಗುಡ್ಡ ಸವದತ್ತಿ ಜಾತ್ರಾ ಕೇಂದ್ರದಲ್ಲಿ ಪ್ರತ್ಯೇಕ ಜಾತ್ರಾ ನಿಯಂತ್ರಣ ಬಿಂದುಗಳಲ್ಲಿ ನುರಿತ ಸಾರಿಗೆ ನಿಯಂತ್ರಕ ಸಿಬ್ಬಂಧಿ ಹಾಗೂ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಿ ಸುವ್ಯವಸ್ಥಿತ ವಿಶೇಷ ವಾಹನಗಳ ವ್ಯವಸ್ಥೆ ಕಲ್ಪಿಸಲಾಗುವುದು. ಯಾತ್ರಿಕರು ಇದರ ಸದುಪಯೋಗ ಪಡೆಯಲು ಕೋರಲಾಗಿದೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 