ಜಿಲ್ಲಾಡಳಿತದಿಂದ ಆಯೋಜಿಸಿದ್ದ ಆದ್ಯ ಜಗದ್ಗುರು ಶಂಕರಾಚಾರ್ಯ ಜಯಂತಿ
Adhya Jagadguru Shankaracharya Jayanti organized by the district administration
ಲೋಕದರ್ಶನ ವರದಿ
ಧಾರವಾಡ 22: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಿನ್ನೆ (ಏ.21) ಸಂಜೆ ಕರ್ನಾಟಕ ಕುಲಪುರೋಹಿತ ಆಲೂರ ವೆಂಕಟರಾವ ಸಾಂಸ್ಕೃತಿಕ ಭವನದಲ್ಲಿ ಆದ್ಯ ಜಗದ್ಗುರು ಶಂಕರಾಚಾರ್ಯ ಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಹುಬ್ಬಳ್ಳಿ ಶಾರದಾ ಶಂಕರ ರಮಣ ಅದ್ವೈತ ಮಠದ ಪರಮಪೂಜ್ಯ ಶಿವಾನಂದ ಭಾರತಿ ಮಹಾಸ್ವಾಮಿಗಳು ಸಾನಿಧ್ಯ ವಹಿಸಿದ್ದರು. ಎಡಿಸಿ ಅವರಾದ ಗೀತಾ ಸಿ.ಡಿ. ಅವರು ಶಂಕರಾಚಾರ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ದೀಪ ಬೆಳಗಿಸುವುದರೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಂಸ್ಕೃತ ಮಹಾವಿದ್ಯಾಲಯದ ಸಹ ಉಪನ್ಯಾಸಕ ವಿದ್ವಾನ್ ಸೂರ್ಯನಾರಾಯಣ ಭಟ್, ಅವರು ಶಂಕರಾಚಾರ್ಯರ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಅವರು ಸ್ವಾಗತಿಸಿದರು. ಬ್ರಾಹ್ಮಣ ಸಮಾಜದ ಅಧ್ಯಕ್ಷ ಆರ್.ಡಿ. ಕಲುಕರ್ಣಿ, ಶಂಕರ ಕುಲಕರ್ಣಿ ಮತ್ತು ಸಮಾಜದ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 