ಬಾಂಬ್ ಪ್ರಕರಣ: ಮಂಗಳೂರು ಪೊಲೀಸರ ವಶಕ್ಕೆ ಆರೋಪಿ ಆದಿತ್ಯ ರಾವ್
ಬೆಂಗಳೂರು, ಜ 22,ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಇಟ್ಟ ಆರೋಪಿ ಆದಿತ್ಯ ರಾವ್‌ನನ್ನು ಬೆಂಗಳೂರು ಪೊಲೀಸರು ಮಂಗಳೂರು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ನ್ಯಾಯಾಲಯದ ಅನುಮತಿ ಪಡೆದು ಮಂಗಳೂರು ಉತ್ತರ ವಿಭಾಗದ ಎಸಿಪಿ ಬೆಳ್ಳಿಯಪ್ಪ ಅವರ ನೇತೃತ್ವದ ತಂಡ ಹಲಸೂರು ಗೇಟ್ ಠಾಣೆಯಲ್ಲಿ ಆರೋಪಿ ಆದಿತ್ಯ ನನ್ನು ವಶಕ್ಕೆ ಪಡೆದಿದೆ. ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ, ಬೆಂಗಳೂರು ಪೊಲೀಸರು ಮಂಗಳೂರು ಪೊಲೀಸರಿಗೆ ಹಸ್ತಾಂತರಿಸಿದರು. ಮೊದಲು ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರೋಪಿ ಆದಿತ್ಯನನ್ನು ಮಂಗಳೂರು ಪೊಲೀಸರಿಗೆ ಒಪ್ಪಿಸಬೇಕು ಎಂದು ನಿರ್ಣಯಿಸಲಾಗಿತ್ತು. ಕೊನೆಯ ಕ್ಷಣದಲ್ಲಿ ಭದ್ರತಾ ದೃಷ್ಟಿಯಿಂದ ಹಲಸೂರು ಗೇಟ್ ಠಾಣೆಯಲ್ಲಿ ಹಸ್ತಾಂತರಿಸುವ ಪ್ರಕ್ರಿಯೆ ಪೂರ್ಣಗೊಳಿಸುವ ನಿರ್ಧಾರವನ್ನು ಬೆಂಗಳೂರು ಪೊಲೀಸರು ಕೈಗೊಂಡರು. ಶೀಘ್ರವೇ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಆರೋಪಿ ಆದಿತ್ಯ ರಾವ್‌ನನ್ನು ತನಿಖಾ ಧಿಕಾರಿಗಳು ಮಂಗಳೂರಿಗೆ ಕರೆದೊಯ್ಯಲಿದ್ದಾರೆ. ಅಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಿ ವಿಚಾರಣೆಗೆ ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 