ಮುಖ್ಯಸ್ಥ ವೈಕೋ ಆಸ್ಪತ್ರೆಗೆ ದಾಖಲು

ಚೆನ್ನೈ, ಆ 21             ರಾಜ್ಯಸಭಾ ಸದಸ್ಯ ಮತ್ತು ಎಂಡಿಎಂಕೆ ಪ್ರಧಾನ ಕಾರ್ಯದರ್ಶಿ ವೈಕೋ   ಆರೋಗ್ಯ ತಪಾಸಣೆಗಾಗಿ ಇಲ್ಲಿನ ಉಪನಗರ ಪೊರೂರ್ ನಲ್ಲಿರುವ  ಶ್ರೀ ರಾಮಚಂದ್ರ ವೈದ್ಯಕೀಯ ಕೇಂದ್ರಕ್ಕೆ ದಾಖಲಾಗಿದ್ದಾರೆ. ಅವರಿಗೆ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ ಎಂದು ಆಸ್ಪತ್ರೆಯ ಮೂಲಗಳು ಇಂದು ತಿಳಿಸಿವೆ. ಅವರು ಸಂತೋಷವಾಗಿದ್ದು, ಅವರ ದೇಹದ ಎಲ್ಲಾ ಅವಯವಗಳು ಸಾಮಾನ್ಯ ಸ್ಥಿತಿಯಲ್ಲಿ ಕಾರ್ಯನಿರ್ವಹಿಸುತ್ತಿವೆ. ಅವರು ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.