ತಂಬಾಕು ಮುಕ್ತ ಕಛೇರಿ, ಕಾಲೇಜುಗಳೆಂಬ ನಾಮಫಲಕ ಅಳವಡಿಸಿ; ಜಿಲ್ಲಾಧಿಕಾರಿ ಡಾ. ಹರೀಶ್ಕುಮಾರ್ ಕೆ.
ಕಾರವಾರ : ತಂಬಾಕು ಮುಕ್ತ ಕಛೇರಿ, ಕಾಲೇಜು, ಆಸ್ಪತ್ರೆ ಎಂಬ ಫಲಕಗಳನ್ನು ಅಳವಡಿಸುವುದರ ಮೂಲಕ ತಂಬಾಕು ಸೇವನೆ ಕಡ್ಡಾಯವಾಗಿ ನಿಷೇಧವಾಗುವಂತೇ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಹರೀಶ್ ಕುಮಾರ್ ಕೆ. ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಶುಕ್ರವಾರ ಬೆಳಿಗ್ಗೆ ಹಮ್ಮಿಕೊಂಡಿದ್ದ ಜಿಲ್ಲಾ ಆರೋಗ್ಯ ಮಿಷನ್ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು ಶಾಲಾ-ಕಾಲೇಜು, ಆಸ್ಪತ್ರೆ ಹಾಗೂ ಸಕರ್ಾರಿ ಕಛೇರಿಗಳಲ್ಲಿ ತಂಬಾಕು ಸೇವನೆ ಕಡ್ಡಾಯವಾಗಿ ನಿಷೇಧವಾಗಬೇಕು. ಈ ಬಗ್ಗೆ ಸೂಕ್ತ ತನಿಖಾ ತಂಡಗಳನ್ನು ನಿಯೋಜಿಸಬೇಕು ಎಂದು ಹೇಳಿದರು.
ಶಿಶು ಜನನ ಹಾಗೂ ಮರಣ ಪ್ರಮಾಣದಲ್ಲಿನ ಏರಿಳಿತಗಳು, ಹೆರಿಗೆ ಸಮಸ್ಯೆಗಳು, ಸಾಂಕ್ರಾಮಿಕ ರೋಗಗಳಾದ ಮಲೇರಿಯಾ, ಚಿಕನ್ಗುನ್ಯಾ, ಇಲಿ ಜ್ವರ, ಮಂಗನ ಕಾಯಿಲೆ ಇವುಗಳ ಬಗ್ಗೆ ದಾಖಲಾದ ಪ್ರಕರಣಗಳು ಹಾಗೂ ಸಂಭವಿಸಿದ ಮರಣ ಪ್ರಮಾಣಗಳು ಹೀಗೆ ಮುಂತಾದ ವಿಷಯಗಳ ಬಗ್ಗೆ ಆರೋಗ್ಯಾಧಿಕಾರಿಗಳಿಂದ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು ಸಮಸ್ಯೆಗಳು ಮರುಕಳಿಸದಿರುವಂತೇ ನೋಡಿಕೊಳ್ಳಬೇಕು ಎಂದು ತಾಲೂಕಾ ಆರೋಗ್ಯಾಧಿಕಾರಿಗಳಿಗೆ ಹಾಗೂ ವೈದ್ಯಾಧಿಕಾರಿಗಳಿಗೆ ಸೂಚಿಸಿದರು.
ವಿದ್ಯಾಥರ್ಿಗಳ ಭವಿಷ್ಯದ ಹಿತದೃಷ್ಟಿಯಿಂದ ಶಾಲಾ-ಕಾಲೇಜುಗಳಲ್ಲಿ ಕಾಲ-ಕಾಲಕ್ಕೆ ವಿದ್ಯಾಥರ್ಿಗಳ ಆರೋಗ್ಯ ತಪಾಸಣೆ ನಡೆಸಿ ಅವರಲ್ಲಿ ನ್ಯೂನ್ಯತೆಗಳಿದ್ದರೆ ಚಿಕಿತ್ಸೆ ಕೊಡಿಸುವ ಕಾರ್ಯವಾಬೇಕು. ದೈಹಿಕವಾಗಿ ಹಾಗೂ ಮಾನಸಿಕವಾಗಿ ವಿದ್ಯಾಥರ್ಿಗಳು ಆರೋಗ್ಯವಂತರಾಗಿರಬೇಕು ಹಾಗೂ ದುಶ್ಚಟಗಳಿಗೆ ದಾಸರಾಗದಂತೇ ವೈದ್ಯಾಧಿಕಾರಿಗಳು, ಶಿಕ್ಷಕರು, ತಂದೆ-ತಾಯಿಗಳು ಮಕ್ಕಳಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದರು. ಆರೋಗ್ಯದ ಹಿತದೃಷ್ಟಿಯಿಂದ ಆಶಾಕಾರ್ಯಕತರ್ೆಯರು, ರೋಗಗಳು ಹರಡುವಂತಹ ಒಳಚರಂಡಿ ವ್ಯವಸ್ಥೆ, ನೀರಿನ ಮಾಲಿನ್ಯದಂತಹ ಸಮಸ್ಯೆಗಳಿರುವ ಜಾಗಗಳನ್ನು ಗುರುತಿಸಿ ಇಲಾಖೆಯ ಗಮನಕ್ಕೆ ತರಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ, ಡಾ.ಜಿ.ಎನ್ ಅಶೋಕ್ ಕುಮಾರ್, ತಾಲೂಕು ಆರೋಗ್ಯಾಧಿಕಾರಿಗಳು, ವೈದ್ಯಾಧಿಕಾರಿಗಳು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಮತ್ತಿತರರು ಹಾಜರಿದ್ದರು.