ಸೊಳ್ಳೆಗಳಿಂದ ಹರಡುವ ರೋಗಗಳ ನಿಯಂತ್ರಣಕ್ಕೆ ಪರಿಸರ ಸ್ವಚ್ಛತಾ ಕ್ರಮ ಅಳವಡಿಸಿಕೊಳ್ಳಿ: ಕುಲಕರ್ಣಿ
Adopt environmental sanitation measures to control mosquito-borne diseases: Kulkarni
ದೇವರಹಿಪ್ಪರಗಿ 19 : ‘ಸೊಳ್ಳೆಗಳಿಂದ ಮಲೇರಿಯಾ, ಡೆಂಗಿ, ಚಿಕುನ್ಗುನ್ಯ, ಮೆದುಳೂ ಜ್ವರ, ಆನೆಕಾಲು ರೋಗ ಸೇರಿದಂತೆ ಹಲವು ಕಾಯಿಲೆಗಳು ಹರಡುತ್ತವೆ. ಹೀಗಾಗಿ ನಮ್ಮ ಮನೆ ಸುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಟ್ಟುಕೊಳ್ಳುವುದರ ಜೊತೆಗೆ ಸೊಳ್ಳೆಗಳ ನಿಯಂತ್ರಣಕ್ಕೆ ಕ್ರಮ ವಹಿಸಬೇಕು’ ಎಂದು ಸಿಂದಗಿ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಕುಲಕರ್ಣಿ ಹೇಳಿದರು. ಪಟ್ಟಣದ ಜೆ.ಎಂ.ಜೆ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಮಲೇರಿಯಾ ಕುರಿತು ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸೊಳ್ಳೆಗಳ ಉತ್ಪತಿಗೆ ಕಡಿವಾಣಕ್ಕೆ ಮೊದಲ ಹೆಜ್ಜೆ ಎಂದರೆ ಮನೆಯ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು.
ಮನೆಯಲ್ಲಿ ಮತ್ತು ಮನೆಯ ಸುತ್ತ ನಿಂತ ನೀರಿನಲ್ಲಿ ಸೊಳ್ಳೆಗಳು ಮೊಟ್ಟೆ ಇಟ್ಟು ಸಂತಾನೋತ್ಪತ್ತಿ ಮಾಡುತ್ತವೆ. ಸೊಳ್ಳೆಗಳ ಸಂತತಿ ಕಡಿಮೆ ಮಾಡಲು ಪರಿಸರದಲ್ಲಿ ಹಾಗೂ ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿ ಮತ್ತು ಸೋಂಕಿತ ಅನಾಫೆಲಿಸ್ ಹೆಣ್ಣು ಸೊಳ್ಳೆ ಕಚ್ಚುವಿಕೆಯಿಂದ ಮಲೇರಿಯಾ ರೋಗವು ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಜ್ವರ ಬಂದಾಗ ಸಮೀಪದ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ಪರೀಕ್ಷೆ ಮಾಡಿಸಿಕೊಳ್ಳಬೇಕು. ಮಲೇರಿಯಾ ಖಚಿತಪಟ್ಟಲ್ಲಿ ಉಚಿತ ಚಿಕಿತ್ಸೆ ಪಡೆಯಬೇಕು.
ಒಟ್ಟಾರೆ ಸೊಳ್ಳೆ ಕಡಿತ ಚಿಕ್ಕದಾದರೂ ಅದರ ಭೀತಿ ದೊಡ್ಡದು ಎಂದರು. ಹಿರಿಯ ಆರೋಗ್ಯ ನೀರೀಕ್ಷಣಾಧಿಕಾರಿ ಪಿ.ವಾಯ್.ಚೌಡಕಿ ಅವರು ಮಾತನಾಡಿ, ಸೊಳ್ಳೆಗಳಿಂದ ಹರಡುವ ರೋಗಗಳ ಲಕ್ಷಣಗಳ ಬಗ್ಗೆ ತಿಳಿಸಿ ಸ್ವಯಂರಕ್ಷಣಾ ವಿಧಾನಗಳಾದ ಸೊಳ್ಳೆ ಪರದೆ ಬಳಕೆ, ಬೇವಿನ ಸೊಪ್ಪಿನ ಹೊಗೆ ಹಾಕುವುದು, ಸೊಳ್ಳೆ ಬತ್ತಿ ಸೇರಿ ಮುನ್ನೆಚ್ಚರಿಕೆ ಕ್ರಮಗಳ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದರು. ಇದೇ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳಾದ ಎಂ.ಆರ್. ಮಾಶ್ಯಾಳ, ಪ್ರಭು ಜಂಗಿನಮಠ, ಸುಕನ್ಯ ಚಳಗೇರಿ, ಮಹಾಲಿಂಗ ಪಕೀರಪುರ, ಲಕ್ಷ್ಮಿಕಾಂತ್ ಲಾಲಿ ಸೇರಿದಂತೆ ಜೆ.ಎಂ.ಜೆ ಬೋಧಕ,ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 