ಗಣಿತ-ವಿಜ್ಞಾನ ಬೋಧನೆಯಲ್ಲಿ ಪ್ರಯೋಗಾತ್ಮಕ ವಿಧಾನ ಅಳವಡಿಸಿಕೊಳ್ಳಿ: ನಿಂಗಪ್ಪ
Adopt the experimental method in teaching mathematics and science: Ningappa
ಹೂವಿನಹಡಗಲಿ, ಆ.೨೪: ಗಣಿತ ಮತ್ತು ವಿಜ್ಞಾನ ವಿಷಯಗಳನ್ನು ಸರಳವಾಗಿ ಹಾಗೂ ಆಸಕ್ತಿದಾಯಕವಾಗಿ ಬೋಧಿಸುವ ಮೂಲಕ ಮಕ್ಕಳಲ್ಲಿ ವಿಷಯದ ಬಗ್ಗೆ ಆಸಕ್ತಿ ಮೂಡಿಸಬೇಕು ಎಂದು ಡಯಟ್ ಉಪನ್ಯಾಸಕ ನಿಂಗಪ್ಪ ಹೇಳಿದರು.
ನಗರದ ಸೊಪ್ಪಿನ ವೀರಮ್ಮ ಹಿರಿಯ ಪ್ರಾಥಮಿಕ ಶಾಲೆಯ ಟಿಎಲ್ಸಿ ಕೇಂದ್ರದಲ್ಲಿ ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಹಾಗೂ ಬಳ್ಳಾರಿ ಸಹಯೋಗದಲ್ಲಿ ಐದು ದಿನಗಳ ಕಾಲ ನಡೆದ ವಿಷಯ ಸಂಪದೀಕರಣ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಗಣಿತ ಮತ್ತು ವಿಜ್ಞಾನ ಪಠ್ಯಪುಸ್ತಕಗಳಲ್ಲಿರುವ ವಿವಿಧ ಘಟಕಗಳನ್ನು ಮಕ್ಕಳಿಗೆ ಸುಲಭವಾಗಿ ಅರ್ಥವಾಗುವಂತೆ ಪ್ರಾಯೋಗಿಕವಾಗಿ ಬೋಧಿಸಬೇಕು. ಪ್ರಯೋಗಗಳ ಮೂಲಕ ವಿಷಯವನ್ನು ಮನವರಿಕೆ ಮಾಡಿಕೊಡುವುದರಿಂದ ಮಕ್ಕಳಲ್ಲಿ ಕಲಿಕೆಯ ಆಸಕ್ತಿ ಹೆಚ್ಚುತ್ತದೆ ಎಂದು ಹೇಳಿದರು.
ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಹೊಸ ಆಯಾಮಗಳನ್ನು ಪರಿಚಯಿಸುವ ನಿಟ್ಟಿನಲ್ಲಿ ಶಿಕ್ಷಕರು ನಿರಂತರ ಪ್ರಯತ್ನ ನಡೆಸಬೇಕು. ತರಬೇತಿಯಲ್ಲಿ ಪಡೆದ ಜ್ಞಾನವನ್ನು ತರಗತಿ ಬೋಧನೆಯಲ್ಲಿ ಪರಿಣಾಮಕಾರಿಯಾಗಿ ಬಳಸಿಕೊಂಡು ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ಕಾರ್ಯನಿರ್ವಹಿಸಬೇಕು ಎಂದು ನಿಂಗಪ್ಪ ಸಲಹೆ ನೀಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಮಂಗಳಾ ಕೆ. ಮಾತನಾಡಿ, ಐದು ದಿನಗಳ ತರಬೇತಿಯಲ್ಲಿ ಪಡೆದ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ಶಾಲಾ ಮಕ್ಕಳಿಗೆ ಧಾರೆ ಎರೆಯುವ ಮೂಲಕ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಕ್ಷೇತ್ರ ಸಮನ್ವಯಾಧಿಕಾರಿ ಎ. ಕೋಟೆಪ್ಪ ಮಾತನಾಡಿ, ಗಣಿತ ಮತ್ತು ವಿಜ್ಞಾನ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರು ಹಾಗೂ ವಿಜ್ಞಾನಿಗಳ ಯಶೋಗಾಥೆಗಳನ್ನು ಮಕ್ಕಳಿಗೆ ಪರಿಚಯಿಸುವ ಮೂಲಕ ಅವರಲ್ಲಿ ಪ್ರಶ್ನಿಸುವ ಮನೋಭಾವ ಮತ್ತು ವೈಚಾರಿಕ ಪ್ರಜ್ಞೆ ಬೆಳೆಸಬೇಕು ಎಂದರು.
ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಬಿ.ರ‍್ಪಿ. ಸಚಿನ್ ಆರಾಧ್ಯ, ಬಸವರಾಜ, ಹೊನ್ನಪ್ಪ, ಶಿಕ್ಷಣ ಸಂಯೋಜಕ ವೀರೇಶ್ ಬಗಲಿ, ಸುನೀಲ್, ಮಂಜುನಾಥ, ಚಿದಾನಂದಪ್ಪ, ಎಂ.ಡಿ. ಭಾಷಾ ಸೇರಿದಂತೆ ಇತರರು ಐದು ದಿನಗಳ ಕಾಲ ಶಿಕ್ಷಕರಿಗೆ ತರಬೇತಿ ನೀಡಿದರು.
ತಾಲೂಕಿನ ೬ರಿಂದ ೮ನೇ ತರಗತಿಗಳಿಗೆ ಬೋಧಿಸುವ ಸುಮಾರು ೮೦ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರು ತರಬೇತಿಯಲ್ಲಿ ಭಾಗವಹಿಸಿ ತರಬೇತಿ ಪಡೆದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 