ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಸರ್ಕಾರಿ ಶಾಲೆಗಳ ದತ್ತು: ಶ್ಲಾಘನೆ
Adoption of government schools from MLAs' Local Area Development Fund: Appreciation
ಬಳ್ಳಾರಿ 19: ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳ ಮೂಲಸೌಕರ್ಯವನ್ನು ಮೇಲ್ದರ್ಜೆಗೇರಿಸಿ, ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುವ ಗುಣಮಟ್ಟದ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕ ಬಿ. ನಾಗೇಂದ್ರ ಅವರು ವಿಶೇಷ ಹೆಜ್ಜೆ ಇಟ್ಟಿದ್ದಾರೆ.ಹಾಗಾಗಿ ಅವರು ತಮ್ಮ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಕ್ಷೇತ್ರದ ಬಂಡಿಹಟ್ಟಿ ಮತ್ತು ಎತ್ತಿನ ಬೂದಿಹಾಳ್ ಗ್ರಾಮದ ಸರ್ಕಾರಿ ಶಾಲೆಗಳ ಸಂಪೂರ್ಣ ಅಭಿವೃದ್ಧಿಗಾಗಿ ತಲಾ 10 ಲಕ್ಷ ರೂಪಾಯಿಗಳ ವಿಶೇಷ ಅನುದಾನವನ್ನು ಬಿಡುಗಡೆಗೊಳಿಸಿದ್ದು, ಶುಕ್ರವಾರ ಈ ಶಾಲೆಗಳನ್ನು ದತ್ತು ಪಡೆದುಕೊಂಡರು.
ಆಯ್ಕೆಯಾದ ಎರಡು ಶಾಲೆಗಳ ಅಭಿವೃದ್ಧಿಗೆ ತಲಾ 10 ಲಕ್ಷ ರೂ. ಗಳಂತೆ ಒಟ್ಟು 20 ಲಕ್ಷ ರೂ. ಅನುದಾನ ಬಿಡುಗಡೆಗೊಳಿಸಿದ್ದಾರೆ. ಸರ್ಕಾರಿ ಶಾಲೆಗಳಲ್ಲಿನ ಮೂಲಸೌಕರ್ಯ ಕೊರತೆಯನ್ನು ನೀಗಿಸುವುದು, ಡಿಜಿಟಲ್ ಕಲಿಕೆಗೆ ಉತ್ತೇಜನ ಮತ್ತು ಆಕರ್ಷಕ ಶಾಲಾ ವಾತಾವರಣ ನಿರ್ಮಾಣ ಮಾಡುವುದಾಗಿದೆ.ಈ ಅನುದಾನದಡಿ ಶಾಲಾ ಕಟ್ಟಡಗಳ ದುರಸ್ತಿ, ಸುಣ್ಣ-ಬಣ್ಣ, ಆಧುನಿಕ ಶೌಚಾಲಯಗಳ ನಿರ್ಮಾಣ, ಕುಡಿಯುವ ನೀರಿನ ವ್ಯವಸ್ಥೆ, ಸ್ಮಾರ್ಟ್ ಕ್ಲಾಸ್ ರೂಮ್ ಹಾಗೂ ಪೀಠೋಪಕರಣಗಳ ವ್ಯವಸ್ಥೆಯನ್ನು ಮಾಡಲಾಗುತ್ತದೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 