ವಯಸ್ಕರ ಬಿಸಿಜಿ ಲಸಿಕೆಯಿಂದ ಕ್ಷಯ ಸೋಂಕು ಪ್ರಮಾಣ ಕಡಿಮೆ: ಜಿ.ಪಂ. ಸಿಇಓ
Adult BCG vaccination reduces tuberculosis infection rate: GP CEO
ಕಾರವಾರ 13 :- ರೋಗ ನಿರೋಧಕ ಶಕ್ತಿ ಕುಂಠಿತಗೊಂಡಿರುವ ವಯಸ್ಕರಿಗೆ ಬಿಸಿಜಿ ಲಸಿಕೆ ನೀಡುವುದರಿಂದ ಸಮುದಾಯದಲ್ಲಿ ಕ್ಷಯ ಸೋಂಕಿನ ಪ್ರಮಾಣ ಕಡಿಮೆಯಾಗುವಲ್ಲಿ ಈ ಲಸಿಕೆ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಡಾ.ದೀಲೀಷ್ ಶಶಿ ತಿಳಿಸಿದರು.
ಅವರು ಬುಧವಾರ ಬೈತಕೋಲ್ ನ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವತಃ ವಯಸ್ಕರ ಬಿಸಿಜಿ ಲಸಿಕೆ ಪಡೆದು ಮಾತನಾಡಿದರು.
ಭಾರತ ಸರಕಾರವು ಕ್ಷಯರೋಗ ನಿರ್ಮೂಲನೆಗೆ ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತರುತ್ತಿದ್ದು ಕ್ಷಯರೋಗದ ವಿರುದ್ಧ ರಕ್ಷಣೆ ನೀಡಲು ವಯಸ್ಕರಿಗೆ ಬಿಸಿಜಿ ಲಸಿಕೆ ನೀಡುವ ಮಹತ್ವದ ಕಾರ್ಯಕ್ರಮವನ್ನು ಪ್ರಾರಂಭಿಸಲಾಗಿದೆ. ದೇಶದಲ್ಲಿ ಒಟ್ಟೂ 274 ಜಿಲ್ಲೆಗಳಲ್ಲಿ , ಕರ್ನಾಟಕದಲ್ಲಿ 16 ಜಿಲ್ಲೆಗಳಲ್ಲಿ ವಯಸ್ಕ ಬಿಸಿಜಿ ಲಸಿಕೆ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ. ಕರ್ನಾಟಕದಲ್ಲಿ 2 ನೇ ಹಂತದಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಜಿ ಲಸಿಕಾಕರಣ ಕಾರ್ಯಕ್ರಮವನ್ನು ಅನುಷ್ಠಾನ ಮಾಡಲಾಗುತ್ತಿದ್ದು, ಜಿಲ್ಲೆಯಲ್ಲಿ ಈ ವರೆಗೆ 22148 ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನೀರಜ್, ಆರ್.ಸಿ.ಹೆಚ್.ಅಧಿಕಾರಿ ಡಾ.ನಟರಾಜ್, ಜಿಲ್ಲಾ ಕ್ಷಯರೋಘ ನಿಯಂತ್ರಣಾಧಿಕಾರಿ ಡಾ.ಹರ್ಷ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶಗುಫಾ ಮತ್ತಿತರರು ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 