ಕಲಬುರಗಿ, ಮಾ.19, ವಿದ್ಯುತ್ ದುರಸ್ತಿ ಕಾರ್ಯದಲ್ಲಿ ತೊಡಗಿದ್ದ ಲೈನ್ಮೆನ್ ಒಬ್ಬರು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಘಟನೆ ಗುಲ್ಬರ್ಗಾ ವಿಶ್ವವಿದ್ಯಾಲಯ ಆವರಣದಲ್ಲಿ ಗುರುವಾರ ವರದಿಯಾಗಿದೆ.
45 ವರ್ಷದ ಇಬ್ರಾಹೀಂ ಮೃತ ದುರ್ದೈವಿ. ಬುಧವಾರ ರಾತ್ರಿ ಮಳೆ ಬಂದ ಹಿನ್ನೆಲೆಯಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿತ್ತು. ಹೀಗಾಗಿ ಇಂದು ಬೆಳಿಗ್ಗೆ ಸ್ಥಳಕ್ಕೆ ಆಗಮಿಸಿದ ಇಬ್ರಾಹಿಂ, ಮುಖ್ಯ ಲೈನ್ ಬಂದ್ ಮಾಡಿ ವಿದ್ಯುತ್ ಕಂಬ ಹತ್ತಿ ದುರಸ್ತಿ ಕಾರ್ಯದಲ್ಲಿ ತೊಡಗಿದ್ದರು. ಅವರು ಕಂಬ ಹತ್ತಿದ ಸ್ವಲ್ಪ ಹೊತ್ತಿನಲ್ಲಿಯೇ ವಿದ್ಯುತ್ ಸಂಚರಿಸಿ ಕಂಬದ ಮೇಲೆಯೇ ಇಬ್ರಾಹಿಂ ಮೃತಪಟ್ಟಿದ್ದಾರೆ ಎನ್ನಲಾಗಿದೆ.ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.