ಯೂರಿಯಾ ರಸಗೊಬ್ಬರ ಬಳಕೆಯ ದುಷ್ಪರಿಣಾಮ: ಜಾಗೃತಿಗಾಗಿ ಹಸ್ತಪತ್ರಿಕೆಗಳ ಬಿಡುಗಡೆ
Adverse effects of urea fertilizer use: Pamphlets released for awareness
ಯೂರಿಯಾ ರಸಗೊಬ್ಬರ ಬಳಕೆಯ ದುಷ್ಪರಿಣಾಮ: ಜಾಗೃತಿಗಾಗಿ ಹಸ್ತಪತ್ರಿಕೆಗಳ ಬಿಡುಗಡೆ
ಬೆಳಗಾವಿ, ಆ.9 : ಯೂರಿಯಾ ರಸಗೊಬ್ಬರದ ಬಳಕೆಯಿಂದಾಗುವ ದುಷ್ಪರಿಣಾಮಗಳು ಹಾಗೂ ಕೃಷಿ ಹೊಂಡಗಳ ಸುತ್ತ ತಂತಿ ಬೇಲಿ ಅಳವಡಿಕೆಯ ಕುರಿತು ಜಾಗೃತಿ ಮೂಡಿಸುವ ಹಸ್ತಪತ್ರಿಕೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಲ ಜಾರಕಿಹೊಳಿ ಅವರು ಶನಿವಾರ(ಆ.9) ಗೋಕಾಕದ ಗೃಹ ಕಚೇರಿಯಲ್ಲಿ ಬಿಡುಗಡೆಗೊಳಿಸಿದರು.
ನಂತರ ಮಾತನಾಡಿದ ಸಚಿವರು, ಅತಿಯಾದ ರಾಸಾಯನಿಕ ಗೊಬ್ಬರ ಬಳಕೆಯಿಂದ ಭೂಮಿಯ ಫಲವತ್ತತೆ ಹಾಳಾಗುತ್ತದೆ. ಆದ್ದರಿಂದ ವೈಜ್ಞಾನಿಕ ಶಿಫಾರಸ್ಸಿನಂತೆ ರಸಗೊಬ್ಬರ ಬಳಕೆ ಮಾಡಬೇಕು ಎಂದು ಸಲಹೆ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಎಚ್.ಡಿ.ಕೊಳೆಕರ್ ಅವರು, ಯೂರಿಯಾ ರಸಗೊಬ್ಬರಗಳ ದುಷ್ಟಪರಿಣಾಮದ ಕುರಿತು ಹಾಗೂ ಯೂರಿಯಾ ರಸಗೊಬ್ಬರದ ದಾಸ್ತಾನಿನ ಕುರಿತು ಮತ್ತು ನಾನೋ ಯೂರಿಯಾ ಬಳಕೆಯ ಕುರಿತು ಸಚಿವರಿಗೆ ವಿವರಿಸಿದರು. ಗೋಕಾಕದ ಸಹಾಯಕ ಕೃಷಿ ನಿರ್ದೇಶಕ ಎಂ.ಎಂ.ನದಾಫ್, ವಿನಾಯಕ್ ತುರಾಯಿದಾರ ಹಾಗೂ ಅಧಿಕಾರಿಗ ಪ್ರಕಾಶ ಪಾಟೀಲ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 