ತೊಗರಿ ಬೆಳೆಯಲ್ಲಿ ಕಂಡುಬರುವ ಗಂಧಕದ ಕೊರತೆ ನಿವಾರಣೆಗೆ ಸಲಹೆ
Advice for overcoming sulfur deficiency in Togari crop
ಬಳ್ಳಾರಿ 19: ಜಿಲ್ಲೆಯ ವಿವಿಧ ತಾಲ್ಲೂಕಿನಲ್ಲಿ ಬೆಳೆದ ತೊಗರಿ ಬೆಳೆಯಲ್ಲಿ ಕಂಡುಬರುತ್ತಿರುವ ಗಂಧಕದ ಕೊರತೆಯ ಲಕ್ಷಣಗಳನ್ನು ಸುಲಭವಾಗಿ ನಿವಾರಿಸಬಹುದು ಎಂದು ಹಗರಿಯ ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ತಿಳಿಸಿದರು.
ಗುರುವಾರ ಹಗರಿಯ ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಕೇಂದ್ರದ ಮುಖ್ಯಸ್ಥರಾದ ಡಾ.ಪಾಲಯ್ಯ,ಪಿ., ಹಿರಿಯ ವಿಜ್ಞಾನಿ (ಮಣ್ಣು ವಿಜ್ಞಾನ) ಡಾ.ರವಿ ಎಸ್., ವಿಜ್ಞಾನಿ (ಗೃಹ ವಿಜ್ಞಾನ) ರಾಜೇಶ್ವರಿ ಹಾಗೂ (ಕೃಷಿ ವಿಸ್ತರಣೆ) ಡಾ.ನವೀನ್‌ಕುಮಾರ್.ಪಿ ಅವರನ್ನೊಳಗೊಂಡ ತಂಡವು ಬಳ್ಳಾರಿ ತಾಲ್ಲೂಕಿನ ಕಗ್ಗಲ್ಲು ಗ್ರಾಮದ ಪ್ರಗತಿಪರ ರೈತರಾದ ಸಮುದ್ರ ರಾಜ ಅವರ ತೊಗರಿ ಕ್ಷೇತ್ರಕ್ಕೆ ಹಾಗೂ ವಿವಿಧ ಹಳ್ಳಿಗಳಿಗೆ ಭೇಟಿ ನೀಡಿ ತೊಗರಿ ಬೆಳೆಯಲ್ಲಿ ಇತ್ತೀಚಿಗೆ ಕಾಣಿಸಿಕೊಂಡಿರುವ ಗಂಧಕದ ಕೊರತೆಯ ಲಕ್ಷಣಗಳ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸಿದರು.
ಗಂಧಕದ ಕೊರತೆಯಿಂದ ಎಲೆಗಳು ಮೊದಲು ಹಳದಿ ಬಣ್ಣಕ್ಕೆ ತಿರುಗಿ ನಂತರ ಚಿಕ್ಕದಾಗಿ ಸಂಪೂರ್ಣ ಹಳದಿ ಬಣ್ಣಕ್ಕೆ ತಿರುಗುತ್ತದೆ. ಈ ಕಾರಣದಿಂದ ಗಿಡದ ಬೇರುಗಳು ಕಪ್ಪು ಬಣ್ಣಕ್ಕೆ ತಿರುಗುತ್ತದೆ ಮತ್ತು ಸಸ್ಯಗಳ ಬೆಳವಣಿಗೆ ಕುಂಠಿತಗೊಳ್ಳುತ್ತದೆ. ಈ ತರಹದ ಲಕ್ಷಣಗಳು ಈಗಾಗಲೇ ತಾಲ್ಲೂಕಿನ ಬೇರೆ ಬೇರೆ ಭಾಗಗಳಲ್ಲಿ ಕಾಣಿಸಿಕೊಂಡಿದೆ.ವಿಜ್ಞಾನಿಗಳ ತಂಡ ರೈತರ ಕ್ಷೇತ್ರಗಳಿಗೆ ಭೇಟಿ ನೀಡಿ ಈ ಸಮಸ್ಯೆಯನ್ನು ಹತೋಟಿಗೆ ತರಲು ಪ್ರತಿ ಎಕರೆಗೆ 20 ಕೆ.ಜಿ ಅಮೋನಿಯಂ ಸಲ್ಫೇಟ್ ಅಥವಾ 10 ಕೆ.ಜಿ ಪೊಟ್ಯಾಶಿಯಂ ಸಲ್ಫೇಟ್ ಅಥವಾ 50 ಕೆ.ಜಿ ಸೂಪರ್ ಪಾಸ್ಪೆಟ್ ಅಥವಾ 100 ಕೆ.ಜಿ ಜಿಪ್ಸಂ ನ್ನು ಬೆರೆಸಿ ಸಿಂಪಡಿಸುವುದರ ಮೂಲಕ ಗಂಧಕದ ಕೊರತೆಯನ್ನು ಸುಲಭವಾಗಿ ನಿವಾರಿಸಬಹುದಾಗಿದೆ ಎಂದು ರೈತರಿಗೆ ಮನವರಿಕೆ ಮಾಡಿಕೊಟ್ಟರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 