ತೊಗರಿಯಲ್ಲಿ ಗೊಡ್ಡು ರೋಗದ ನಿರ್ವಹಣೆಗೆ ಸಲಹೆ
Advice for the management of gout in Togari
ಕೊಪ್ಪಳ 17 : ತೊಗರಿಯಲ್ಲಿನ ಕಂಡು ಬರುವ ಗೊಡ್ಡು ರೋಗದ ನಿರ್ವಹಣೆಗಾಗಿ ಕೃಷಿ ಇಲಾಖೆಯಿಂದ ಕೆಲವು ಸಲಹೆಗಳನ್ನು ನೀಡಲಾಗಿದೆ. ಹಾನಿಯ ಲಕ್ಷಣಗಳು: ತೊಗರಿಯಲ್ಲಿ ಗೊಡ್ಡು ರೋಗ ಬಂದ ಗಿಡಗಳು ಸಣ್ಣ ಗಾತ್ರದ, ಮೇಲ್ಬಾಗದಲ್ಲಿ ತಿಳಿ ಮತ್ತು ದಟ್ಟ ಹಳದಿ ಬಣ್ಣದ ಮೋಜಾಯಿಕ್ ತರಹದ ಮಚ್ಚೆಗಳನ್ನು ಹೊಂದಿ ಮುಟುರಿಕೊಂಡಿರುವ, ಹೆಚ್ಚಿನ ಸಂಖ್ಯೆಯ ಎಲೆಗಳನ್ನು ಹೊಂದಿ ಹೂ ಕಾಯಿಗಳಿಲ್ಲದೆ ಗೊಡ್ಡಾಗಿ ಉಳಿಯುತ್ತವೆ. ಬೆಳೆಯ ಎಳೆಯ ವಯಸ್ಸಿನಲ್ಲಿ ಈ ರೋಗ ಬಂದರೆ ಕಾಂಡವು ಉದ್ದವಾಗಿ ಬೆಳೆಯದೆ ಸಣ್ಣ ಟೊಂಗೆಗಳು ಹಾಗೂ ತಿಳಿ ಹಳದಿ ಬಣ್ಣದ ಚಿಕ್ಕ ಗಾತ್ರದ ಮುಟುರಿಕೊಂಡಿರುವ ಎಲೆಗಳ ಗುಂಪಿನಿಂದ ಕೂಡಿ ಕಂಟಿಯಂತಾಗಿ ಗೊಡ್ಡು ಆಗುವುದು. ಈ ರೋಗವು ಶೇ. 30ರಷ್ಟು ಹಾನಿ ಮಾಡುತ್ತದೆ.
ರೋಗದ ನಿರ್ವಹಣೆ: ತೊಗರಿಯಲ್ಲಿ ಗೊಡ್ಡು ರೋಗ ಬಂದ ಗಿಡಗಳನ್ನು ಕಿತ್ತು ನಾಶಮಾಡಬೇಕು. ನುಸಿ ನಾಶಕಗಳಾದ ಡಿಕೋಫಾಲ್ 18.5 ಇ.ಸಿ. 2.5 ಮಿ.ಲೀ. ಅಥವಾ ನೀರಿನಲ್ಲಿ ಕರಗುವ ಗಂಧಕ 2.5 ಗ್ರಾಂ ಅಥವಾ ಇಥಿಯಾನ್ 50 ಇ.ಸಿ. 2 ಮಿ.ಲೀ. ಅಥವಾ ಫೆನಾಜ್ಕ್ವಿನ್ 10 ಇ.ಸಿ. 2.00 ಮಿ.ಲೀ. ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಬೇಕು. ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು, ಕೃಷಿ ಅಧಿಕಾರಿ ರೈತ ಸಂಪರ್ಕ ಕೇಂದ್ರ ಅಥವಾ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರು, ಐ.ಸಿ.ಎ.ಆರ್-ಕೃಷಿ ವಿಜ್ಞಾನ ಕೇಂದ್ರ, ಗಂಗಾವತಿ ಇವರನ್ನು ಸಂಪರ್ಕಿಸಬಹುದು ಎಂದು ಕೊಪ್ಪಳ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 