ಎಸ್ಎಸ್ಎಲ್ಸಿ ಫಲಿತಾಂಶ ಕುರಿತು ಸಲಹೆ

ಗದಗ ೨೩: ಮುಂಬರುವ ಮಾರ್ಚನಲ್ಲಿ ಜರುಗುವ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಗದಗ ಜಿಲ್ಲೆಯ ಫಲಿತಾಂಶದ ಸುಧಾರಣೆ ಕುರಿತು ಗದಗ ಜಿಲ್ಲಾ ಪಂಚಾಯತ ಅಧ್ಯಕ್ಷ ಸಿದ್ದಲಿಂಗೇಶ್ವರ ಎಚ್.ಪಾಟೀಲ ಇವರು ದಿ. 22ರಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ಜರುಗಿಸಿದರು. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಜಿಲ್ಲೆಯ ಸಾಧನೆ ಉತ್ತಮ ಪಡಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ತೆಗೆದುಕೊಂಡು ಕ್ರಮಗಳ ಕುರಿತು ಚರ್ಚಿಸಿದ ಅವರು ಫಲಿತಾಂಶ ಸುಧಾರಣೆಗೆ ಕೈಗೊಳ್ಳಬೇಕಾದ ಸಲಹೆ ಸೂಚನೆಗಳನ್ನು ನೀಡಿದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಎನ್.ಎಸ್.ನಾಗೂರ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಸಮನ್ವಯ ಅಧಿಕಾರಿಗಳು  ಸೇರಿದಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗಳು ಉಪಸ್ಥಿತರಿದ್ದರು.