ಅಧ್ಯಾಯನದ ಜೊತೆಗೆ ಸಂಶೋಧನೆಯಲ್ಲಿ ತೊಡಗಲು ವಿದ್ಯಾಥರ್ಿನಿಯರಿಗೆ ಸಲಹೆ

ವಿಜಯಪುರ, 8 : ವಿದ್ಯಾಥರ್ಿನಿಯರು ತಮ್ಮ ಓದಿನ ಜೊತೆಗೆ ಸಂಶೋಧನೆಯಲ್ಲಿ ತೊಡಗಬೇಕು. ಮೂಲಕ ದೇಶದ ಅಭಿವೃದ್ಧಿಗೆ ತಮ್ಮದೇ ಆದ ಕಾಣಿಕೆ ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಕನರ್ಾಟಕ ರಾಜ್ಯ ವಿಜ್ಞಾನ ಪರಿಷತ್ ಅಧ್ಯಕ್ಷರಾದ ಎಸ್.ವಿ.ಸಂಕನೂರು ಸಲಹೆ ನೀಡಿದರು.

                ಕನರ್ಾಟಕ ರಾಜ್ಯ ವಿಜ್ಞಾನ ಪರಿಷತ್ತು ಜಿಲ್ಲಾ ಸಮಿತಿ, ವಿಜಯಪುರ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕನರ್ಾಟಕ ಸಕರ್ಾರ ಮತ್ತು ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಇವರ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ಮಹಿಳಾ ವಿಶ್ವವಿದ್ಯಾನಿಲಯದ ಡಾ.ಬಿ.ಆರ್.ಅಂಬೇಡ್ಕರ್ ಸಭಾ ಭವನದಲ್ಲಿ "ಕನ್ನಡದಲ್ಲಿ ವಿಜ್ಞಾನ ಉಪನ್ಯಾಸ ಸ್ಪಧರ್ೆ-2018" ಸಮಾರೋಪ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

                ದೇಶದ ಅಭಿವೃದ್ದಿಯಲ್ಲಿ ವಿಜ್ಞಾನದ ಪಾತ್ರವು ಬಹಳ ಮುಖ್ಯವಾಗಿದೆ. ದೇಶದ ಅಭಿವೃದ್ದಿಯಲ್ಲಿ ಎಲ್ಲ ವಿದ್ಯಾಥರ್ಿನಿಯರು ಕೈಜೋಡಿಸಲು ಹಾಗೂ ಕನ್ನಡವನ್ನು  ವಿಜ್ಞಾನದಲ್ಲಿ ಹೆಚ್ಚು ಬಳಸಲು ಮುಂದಾಗಬೇಕು. ಇದಕ್ಕೆ ಕನರ್ಾಟಕ ರಾಜ್ಯ ವಿಜ್ಞಾನ ಪರಿಷತ್ ಅಗತ್ಯ ಸಹಕಾರ ಮತ್ತು ನೆರವು ನೀಡಲಿದೆ ಎಂದರು.

                ವಿದ್ಯಾಥರ್ಿನಿಯರು ಸಮಾಜಕ್ಕೆ ಏನಾದರು ಕೊಡುಗೆ ನೀಡುವ ಛಲವನ್ನು ಹೊಂದಿರಬೇಕು. ನಿಟ್ಟಿನಲ್ಲಿ ಸದಾ ಕಾರ್ಯಪ್ರವೃತ್ತರಾಗಿರಬೇಕು ಎಂದು ಅವರು ಕಿವಿಮಾತು ಹೇಳಿದರು.

                ಕಾರ್ಯಕ್ರಮಕ್ಕೆ ಅಧ್ಯಕ್ಷತೆ ವಹಿಸಿದ್ದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಸಬಿಹಾ ಭೂವಿಗೌಡ ಅವರು ಮಾತನಾಡಿ, ಮಾತೃಭಾಷೆಯಲ್ಲಿ ವಿಜ್ಞಾನವನ್ನು ಜನ ಸಾಮ್ಯಾನರ ಬಳಿ ಕೊಂಡೊಯ್ಯುವುದು ಅವಶ್ಯವಾಗಿದೆ ಎಂದರು.

                ವಿಜ್ಞಾನವನ್ನು ಸಾಹಿತ್ಯಧ ರೂಪದಲ್ಲಿ ಜನಪ್ರಿಯಗೊಳಿಸಬೇಕಾದ ಅಗತ್ಯವಿದ್ದು ನಿಟ್ಟಿನಲ್ಲಿ ಕನರ್ಾಟಕ ರಾಜ್ಯ ವಿಜ್ಞಾನ ಪರಿಷತ್ ಸೂಕ್ತ ಕ್ರಮಗಳನ್ನು ಕೈಕೊಳ್ಳಲು ಮುಂದಾಗಬೇಕು ಎಂದು ಸಲಹೆ ಮಾಡಿದರು.

                ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕನರ್ಾಟಕ ರಾಜ್ಯ ವಿಜ್ಞಾನ ಪರಿಷತ್ನ ಗೌರವ ಕಾರ್ಯದಶರ್ಿ ಗಿರೀಶ್ ಕಡ್ಲೇವಾಡ, ಹಾಗೂ ಜಗನಾಥ ಹಲಮಡಗಿ ಮತ್ತಿತರರು ಉಪಸ್ಥಿತರಿದ್ದರು.

                ಜೈವಿಕ ಮಾಹಿತಿ ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ.ಸಿ.ಕೆ.ರಮೇಶ ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕ ಹಾಗೂ ಕಾರ್ಯಕ್ರಮದ ಸಂಯೋಜಕ ಡಾ.ಬಾಬು.ಆರ್.ಎಲ್. ವಂದಿಸಿದರು. ಕನರ್ಾಟಕ ರಾಜ್ಯ ವಿಜ್ಞಾನ ಪರಿಷತ ಜಿಲ್ಲಾ ಸಮಿತಿ ಜಂಟಿ ಕಾರ್ಯದಶರ್ಿ ಶ್ರೀರಾಮ ಭಟ್ಟ ಅವರು ಕಾರ್ಯಕ್ರಮ ನಿರೂಪಿಸಿದರು