ಗಾಂಜಾ ಕಿಂಗ್ಪಿನ್ ದೌಲ ಬಂಧನಕ್ಕೆ ಸಲಹಾ ಸಮಿತಿ ಸಮ್ಮತಿ
Advisory committee approves arrest of marijuana kingpin Daula
ಬಳ್ಳಾರಿ 17: ಎನ್ಡಿಪಿಎಸ್ ಪ್ರಕರಣಗಳ ಪ್ರಮುಖ ಆರೋಪಿ ಡಿ. ದೌಲ ಅಲಿಯಾಸ್ ಎಸ್. ದೌಲನನ್ನು ಒಂದು ವರ್ಷದವರೆಗೆ ಬಂಧನದಲ್ಲಿಡುವ ಆದೇಶಕ್ಕೆ ಸಲಹಾ ಸಮಿತಿಯಿಂದ ಸಮ್ಮತಿ ದೊರೆತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಗರದ ರಾಣಿತೋಟ ನಿವಾಸಿಯಾದ ಡಿ. ದೌಲ ಅಲಿಯಾಸ್ ಎಸ್. ದೌಲಾ ಅಲಿಯಾಸ್ ಮೆಹಬೂಬ್ ದೌಲ (40) ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಾದಕ ಪದಾರ್ಥಗಳ ಸಂಗ್ರಹಣೆ, ಸಾಗಣೆ ಹಾಗೂ ಮಾರಾಟ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈತನ ವಿರುದ್ಧ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಎನ್ಡಿಪಿಎಸ್ ಕಾಯ್ದೆಯಡಿ ಒಟ್ಟು 21 ಪ್ರಕರಣಗಳು ದಾಖಲಾಗಿವೆ.ನಿರಂತರವಾಗಿ ಮಾದಕ ದ್ರವ್ಯ ಸಾಗಣೆ ಮತ್ತು ಮಾರಾಟದಲ್ಲಿ ತೊಡಗುವ ಮೂಲಕ ಸಮಾಜದ ಸ್ವಾಸ್ಥ್ಯಕ್ಕೆ ಧಕ್ಕೆ ಉಂಟುಮಾಡುತ್ತಿದ್ದ ಹಿನ್ನೆಲೆಯಲ್ಲಿ, ಸಮಾಜದ ಹಿತದೃಷ್ಟಿಯಿಂದ ಕಾಯ್ದೆಯ ಅನ್ವಯ ಬಂಧನ ಪ್ರಸ್ತಾವನೆಯನ್ನು ಐಜಿಪಿ ಅವರಿಗೆ ಸಲ್ಲಿಸಲಾಗಿತ್ತು. ಇದರ ಮೇರೆಗೆ ಐಜಿಪಿ ಹರ್ಷ ಅವರು ದೌಲನನ್ನು ಒಂದು ವರ್ಷದವರೆಗೆ ಬಂಧನದಲ್ಲಿಡಲು ಆದೇಶಿಸಿದ್ದರು.
ಈ ಸಂಬಂಧ ಉಚ್ಚ ನ್ಯಾಯಾಲಯದ ನ್ಯಾಯಾಧೀಶರನ್ನು ಒಳಗೊಂಡ ಸಲಹಾ ಸಮಿತಿಯಲ್ಲಿ ವಿಚಾರಣೆ ನಡೆದಿದ್ದು, ಸರ್ಕಾರದ ಪರವಾಗಿ ಎಸ್ಪಿ ಡಾ. ಸುಮನ್ ಡಿ. ಪೆನ್ನೇಕರ್ ಹಾಗೂ ಹಿರಿಯ ಕಾನೂನು ಸಲಹೆಗಾರ ಟಿ.ಎಸ್. ಪಾಟೀಲ್ ವಾದ ಮಂಡಿಸಿದ್ದರು.ವಿಚಾರಣೆ ಬಳಿಕ ದೌಲನನ್ನು 12 ಫೆಬ್ರವರಿ 2027ರವರೆಗೆ ಬಂಧನದಲ್ಲಿರಿಸಲು ಸಮಿತಿ ಸಮ್ಮತಿ ನೀಡಿದೆ. ಸದ್ಯ ಆತ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿದ್ದಾನೆ.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 