ರಾಸಾಯನಿಕ ಘಟಕದಿಂದ ವಿಷಾನಿಲ ಸೋರಿಕೆ: 5 ಸಾವು
ವಿಶಾಖಪಟ್ಟಣ, ಮೇ 7, ಆಂಧ್ರಪ್ರದೇಶದ ವಿಶಾಖಪಟ್ಟಣಂನ ಬಹುರಾಷ್ಟ್ರೀಯ ಕೈಗಾರಿಕಾ ರಾಸಾಯನಿಕ ಘಟಕದಿಂದ ಗುರುವಾರ ವಿಷಾನಿಲ ಸೋರಿಕೆಯಾಗಿ ಐವರು ಸಾವನ್ನಪ್ಪಿದ್ದು, ಇತರೆ 200 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ . ಸುಮಾರು 1 ಸಾವಿರಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದು ಸ್ಥಳಕ್ಕೆ ಪೊಲೀಸರು, ಆಂಬ್ಯುಲೆನ್ಸ್ಗಳು, ಅಗ್ನಿಶಾಮಕ ಸಿಬ್ಬಂದಿಗಳು ಧಾವಿಸಿದ್ದಾರೆ ಎಂದೂ ವರದಿಯಾಗಿದೆ. ವಿಶಾಖಪಟ್ಟಣಂನ ಆರ್ ಆರ್ ವೆಂಕಟಪುರಂನಲ್ಲಿರುವ ಎಲ್ ಜಿ ಪಾಲಿಮರ್ಸ್ ಕೈಗಾರಿಕಾ ಘಟಕದಲ್ಲಿ ವಿಷಾನಿಲ ಸೋರಿಕೆಯಾಗಿ, ನಂತರ ಗಾಳಿಯಲ್ಲಿ ಇದು ಸುತ್ತಮುತ್ತಲ ಪ್ರದೇಶಗಳಿಗೆ ಹರಡಿದೆ. ಪರಿಣಾಮವಾಗಿ ಹಲವರಿಗೆ ಉಸಿರಾಟದ ಸಮಸ್ಯೆ ಎದುರಾಗಿದೆ. ಮಾತ್ರವಲ್ಲದೆ ಕಣ್ಣು ಸುಡುವ ಅನುಭವವೂ ಆಗಿದೆ. ಹಲವು ಮಂದಿ ಕೂಡಲೇ ಅಸ್ವಸ್ಥರಾಗಿದ್ದಾರೆ ಎನ್ನಲಾಗಿದೆ ಈ ಸ್ಥಳಗಳಲ್ಲಿ ವಾಸವಿರುವವರು ಮನೆಗಳಿಂದ ಹೊರಬರದಂತೆ ಮಹಾನಗರ ಪಾಲಿಕೆ ಟ್ವೀಟ್ ಮೂಲಕ ಮನವಿ ಮಾಡಿದೆ.
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ 