ಎನ್ ಇಪಿ ಜಾರಿಯಾದ ನಂತರ ವಿದ್ಯಾರ್ಥಿಗಳ ಅಂಕ ಪಟ್ಟಿ ಬಂದಿಲ್ಲ : ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ
ಕಾರವಾರ 18: ರಾಜ್ಯದಲ್ಲಿ ಎನ್ ಇ ಪಿ 2020 ಜಾರಿಯಾದ ನಂತರ ಸುಮಾರು 22 ಕ್ಕೂ ಹೆಚ್ಚು ವಿಶ್ವವಿದ್ಯಾನಿಲಯಗಳು ಸುಮಾರು 51 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಅಂಕಪಟ್ಟಿ ವಿತರಣೆ ಮಾಡಿಲ್ಲ ಎಂದು ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್.ಎಫ್.ಐ ) ಉತ್ತರ ಕನ್ನಡ ಜಿಲ್ಲಾ ಸಮಿತಿ ಅಪಾದಿಸಿತು. ಈ ಸಂಬಂಧ ಬುಧುವಾರ ಸಂಜೆ ಅಪರ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಹಾಗೂ ರಾಜ್ಯ ಪಾಲರಿಗೆ ಸಮಸ್ಯೆ ಬಗೆ ಹರಿಸಲು ಮನವಿ ಮಾಡಿತು.
ಪ್ರಸ್ತುತ ರಾಜ್ಯ ಸರ್ಕಾರ ರಾಜ್ಯದಲ್ಲಿ ಎನ್ ಇಪಿ ರದ್ದುಗೊಳಿಸಿ ಎಸ್ ಇ ಪಿ ಜಾರಿಗೊಳಿಸಿದೆ . ಆದರೆ ಎಸ್ ಇ ಪಿ ವಿದ್ಯಾರ್ಥಿಗಳಿಗೂ ಸಹ ಅಂಕಪಟ್ಟಿ ಸಿಗುತ್ತಿಲ್ಲ. ಉನ್ನತ ವಿದ್ಯಾಭ್ಯಾಸಕ್ಕೆ ಅಂಕ ಪಟ್ಟಿ ಬೇಕಾಗಿರುವ ಕಾರಣ ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯಗಳ ಹತ್ತಿರ ಹೋಗಿ ಅಲೆದಾಡುವ ಪರಿಸ್ಥಿತಿ ಎದುರಾಗಿದೆ. ವಿಶ್ವವಿದ್ಯಾನಿಲಯದ ಬಳಿ ವಿದ್ಯಾರ್ಥಿಗಳು ಅಂಕಪಟ್ಟಿ ಕೇಳಿಕೊಂಡು ಹೋದರೆ ಡಿಜಿ ಲಾಕರ್ ( ಆರ ಐಠಞಜಡಿ ) ನಲ್ಲಿ ಅಂಕಪಟ್ಟಿ ತೆಗೆದುಕೊಳ್ಳಿ ಎಂದು ತಿಳಿಸುತ್ತಿದ್ದಾರೆ ಆದರೆ ಡಿಜಿ ಲಾಕರ್ ನಲ್ಲಿಯೂ ಸಹ ಅಂಕಪಟ್ಟಿ ಸಿಗುತ್ತಿಲ್ಲ.
ವಿದ್ಯಾರ್ಥಿಗಳು ಕಾಲೇಜಿನಲ್ಲಿ ವಿಚಾರಿಸಿದರೆ ವಿಶ್ವವಿದ್ಯಾಲಯದಲ್ಲಿ ತಾಂತ್ರಿಕ ಸಮಸ್ಯೆ ಇದೆ ಎಂದು ವಿದ್ಯಾರ್ಥಿಗಳಿಗೆ ತಿಳಿಸುತ್ತಾರೆ. ಈ ಸಮಸ್ಯೆ ಯುಸಿಸಿ ಎಂ ಎಸ್ ಜಾರಿಗೆ ಬಂದ ದಿನದಿಂದ ಇದೆ ಸಮಸ್ಯೆ ಉಂಟಾಗುತ್ತಿದೆ. ಇದರಿಂದ ಉನ್ನತ ವಿದ್ಯಾಭ್ಯಾಸಕ್ಕೆ ಹೋಗುತ್ತಿರುವ ವಿದ್ಯಾರ್ಥಿಗಳಿಗೆ ಈ ಸಮಸ್ಯೆ ಉಂಟಾಗುತ್ತಿದೆ. ಮತ್ತು ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ, ಅರ್ಜಿ ಸಲ್ಲಿಸಲು ಮತ್ತು ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಸಲ್ಲಿಸಲು ಸಹ ತೊಂದರೆ ಉಂಟಾಗುತ್ತಿದೆ. ಕಾರಣ ಈ ಸಮಸ್ಯೆ ಬಗೆ ಹರಿಸಲು ಎಸ್ ಎಫ್ ಐ ವಿನಂತಿಸಿದೆ.