ಮೀಸಲಾತಿಗಾಗಿ ವಿಜಯಪುರ ಜಿಲ್ಲೆಯನ್ನು ಸೇರೆ್ಡಗೊಳಿಸಲು ಹೋರಾಟ ಸಮಿತಿ ಮನವಿ
Agitation committee appeals for the inclusion of Vijayapura district for reservation
ವಿಜಯಪುರ 18 : ವಿಜಯಪುರ ಜಿಲ್ಲೆಯನ್ನು ಸಂವಿಧಾನದ 371(ಎ) ವಿಧಿಯ ವ್ಯಾಪ್ತಿಗೆ ಸೇರಿಸುವಂತೆ ಆಗ್ರಹಿಸಿ ವಿಜಯಪುರ ಜಿಲ್ಲಾ 371(ಎ) ಹೋರಾಟ ಸಮಿತಿ ಸದಸ್ಯರು ಶಾಸಕ ಯಶವಂತರಾಯಗೌಡ ಪಾಟೀಲ ಅವರಿಗೆ ಮನವಿ ಸಲ್ಲಿಸಿದರು.
ಸಂವಿಧಾನದ 371(ಎ) ವಿಧಿಗೆ ತಿದ್ದುಪಡಿ ಮಾಡಿ ವಿಜಯಪುರ ಜಿಲ್ಲೆಯನ್ನು ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಸೇರೆ್ಡಗೊಳಿಸಲು ರಾಜ್ಯ ಸರ್ಕಾರದಿಂದ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿಕೊಡಬೇಕು ಎಂದು ಹೋರಾಟ ಸಮಿತಿ ಸದಸ್ಯರು ಒತ್ತಾಯಿಸಿದರು. ಅಲ್ಲದೆ, ಮೀಸಲಾತಿ ಜಾರಿಗೆ ಬರುವವರೆಗೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಸೌಲಭ್ಯಗಳನ್ನು ವಿಜಯಪುರ ಜಿಲ್ಲೆಗೂ ವಿಸ್ತರಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಯಿತು.
ಮನವಿ ಸ್ವೀಕರಿಸಿದ ಶಾಸಕ ಯಶವಂತರಾಯಗೌಡ ಪಾಟೀಲ ಅವರು ಹೋರಾಟ ಸಮಿತಿಯ ಬೇಡಿಕೆಗೆ ಸರ್ಕಾರದ ಮಟ್ಟದಲ್ಲಿ ಸಕಾರಾತ್ಮಕವಾಗಿ ಸ್ಪಂದಿಸಿ, ವಿಜಯಪುರ ಜಿಲ್ಲೆಗೆ 371(ಎ) ಮೀಸಲಾತಿ ದೊರಕಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
ವಿಜಯಪುರ ಜಿಲ್ಲೆಯ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸೌಲಭ್ಯ, ಯುವಕರಿಗೆ ನೇಮಕಾತಿಯಲ್ಲಿ ಮೀಸಲಾತಿ ಹಾಗೂ ಕಲ್ಯಾಣ ಕರ್ನಾಟಕ ಭಾಗಕ್ಕೆ ದೊರೆಯುವ ವಿಶೇಷ ಅನುದಾನ ಸೇರಿದಂತೆ ಜಿಲ್ಲೆಯ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ 371(ಎ) ತಿದ್ದುಪಡಿ ಅಗತ್ಯವಾಗಿದೆ ಎಂದು ಹೋರಾಟಗಾರರು ತಿಳಿಸಿದರು. ಜಿಲ್ಲೆಯ ಸುಮಾರು 25 ಲಕ್ಷ ಜನರಿಗೆ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಈ ಬೇಡಿಕೆಯನ್ನು ಸರ್ಕಾರ ಪರಿಗಣಿಸಬೇಕು ಎಂದು ಅವರು ಒತ್ತಾಯಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 