ಮುಂಬೈ: ಮುಂಬೈನಲ್ಲಿರುವ ಭಾರತ್ ಪೆಟ್ರೋಲಿಯಂ ಕಾಪರ್ೊರೇಷನ್ ಲಿಮಿಟಿಡ್(ಬಿಪಿಸಿಎಲ್) ಸಂಸ್ಕರಣಾ ಘಟಕದಲ್ಲಿ ಬುಧವಾರ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ 43 ಮಂದಿ ಗಾಯಗೊಂಡಿದ್ದಾರೆ.
ಇಂದು ಮಧ್ಯಾಹ್ನ 2.55ರ ಸುಮಾರಿಗೆ ಚೆಂಬೂರ್ ನ ಮಹಲ್ ಗಾಂವ್ ನಲ್ಲಿರುವ ಬಿಪಿಸಿಎಲ್ ಘಟಕದಲ್ಲಿ ಅವಘಡ ಸಂಭವಿಸಿದೆ. ಸ್ಥಳಕೆ ಒಂಬತ್ತು ಅಗ್ನಿ ಶಾಮಕ ವಾಹನಗಳು ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯ ಭರದಿಂದ ಸಾಗುತ್ತಿದೆ.
ಗಾಯಾಳುಗಳ ಪೈಕಿ 22 ಕಾಮರ್ಿಕರಿಗೆ ಬಿಪಿಸಿಎಲ್ ಪ್ರಾಥಮಿಕ ಚಿಕಿತ್ಸಾ ಕೇಂದ್ರದಲ್ಲೇ ಚಿಕಿತ್ಸೆ ನೀಡಿ, ಮನೆಗೆ ಕಳುಹಿಸಲಾಗಿದೆ. ಇನ್ನು 21 ಮಂದಿಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಚೆಂಬೂರ್ ನಲ್ಲಿರುವ ಇಂಡೇಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಓರ್ವನ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಐಸಿಯುಗೆ ದಾಖಲಿಸಲಾಗಿದೆ. (ಫೋಟೊ 7)