ಅಗ್ನಿಬನ್ನಿರಾಯರು ಸರ್ವಜನಾಂಗದ ಏಳಿಗೆಗಾಗಿ ಶ್ರಮಿಸಿದವರು: ಪ್ರಮೋದ ನಾಯ್ಕ
Agnibanni Raya worked for the prosperity of all people: Pramod Naik
ಲೋಕದರ್ಶನ ವರದಿ
ಕಾರವಾರ 28: ಕ್ಷತ್ರಿಯ ಸಮಾಜದ ಆರಾಧ್ಯ ದೈವವಾಗಿರುವ ಶ್ರೀ ಅಗ್ನಿಬನ್ನಿರಾಯರು ಭಾರತೀಯ ಪರಂಪರೆಗೆ ಮಹತ್ವದ ಕೊಡುಗೆ ನೀಡಿದ್ದಾರೆ. ಇವರು ಕೇವಲ ಒಂದೇ ಸಮಾಜಕ್ಕೆ ಸೀಮಿತರಾಗದೇ, ಸಮಸ್ತ ಜನಾಂಗದ ಏಳಿಗೆಗಾಗಿ ಶ್ರಮಿಸಿದವರು ಎಂದು ಜಿಲ್ಲಾಧಿಕಾರಿ ಕಚೇರಿಯ ಚುನಾವಣಾ ಶಾಖೆಯ ತಹಶೀಲ್ದಾರ ಪ್ರಮೋದ ನಾಯ್ಕ ಹೇಳಿದರು. ಅವರು ಶನಿವಾರ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಶ್ರೀ ಅಗ್ನಿಬನ್ನಿರಾಯ ಜಯಂತಿ ಕಾರ್ಯಕ್ರಮವನ್ನು ಅಗ್ನಿಬನ್ನಿರಾಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಅಗ್ನಿಬನ್ನಿರಾಯ ಕುರಿತು ಶಿವಾಜಿ ಕಲಾ, ವಾಣಿಜ್ಯ ಹಾಗೂ ಬಿ.ಸಿ.ಎ ಮಹಾವಿದ್ಯಾಲಯದ ನಿವೃತ್ತ ಪ್ರಾಚಾರ್ಯ ಎ.ಜಿ. ಕೆರಳೆಕರ ವಿಶೇಷ ಉಪನ್ಯಾಸ ನೀಡಿ, ಕ್ಷತ್ರಿಯ ಜನಾಂಗದ ಅಗ್ನಿಬನ್ನಿರಾಯರು ಸರ್ವಜನರ ಕಲ್ಯಾಣಕ್ಕಾಗಿ ತಮ್ಮ ಜೀವನವನ್ನು ಸಮರ್ಿಸಿಕೊಂಡವರು. ತಿಗಳ ಸಮಾಜದ ಆರಾಧ್ಯದೈವ್ಯ ಅಷ್ಟೇ ಅಲ್ಲದೇ ಸರ್ವ ಜನಾಂಗದ ಅರಾದ್ಯ ದೈವವಾಗಿದ್ದಾರೆ. ಅವರು ಜನರಲ್ಲಿ ಮಾನವೀಯತೆ, ಕರುಣೆ ಮತ್ತು ಧರ್ಮದ ಮೌಲ್ಯಗಳನ್ನು ಬಿತ್ತಿದ ಮಹಾನ್ ವ್ಯಕ್ತಿತ್ವ. ಜನರ ಕಷ್ಟ ಕಾರ್ಪಣಯಗಳನ್ನು ಅರಿತು ಅವುಗಳಿಗೆ ಸೂಕ್ತ ಸಲಹೆ ನೀಡಿ, ಕಾರ್ಯಚಾರಣೆಗೆ ತಂದು ಮನುಕುಲಕ್ಕೆ ಉನ್ನತ್ತಿಕರಣಕ್ಕೆ ಕಾರಣಿಕರ್ತರಾಗಿದ್ದಾರೆ. ಅವರ ಆದರ್ಶ ತತ್ವಗಳು ಪ್ರತಿಯೊಬ್ಬರು ಅಳವಡಿಸಿಕೊಂಡು ತಮ್ಮ ಜೀವನವನ್ನು ಸಾರ್ಥಕ ಮಾಡಿಕೊಳ್ಳೋಣ ಎಂದರು
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ಜಿಲ್ಲಾಧ್ಯಕ್ಷ ಸಂಜೀವ್ ಕುಮಾರ್, ಸ್ಟಾರ್ ಚಾಯ್ಸ್ ತಂಡದ ರಾಜನ್ ಎಂ. ಬಾನವಳಿಕರ ಹಾಗೂ ತಂಡದ ಸದಸ್ಯರು ಮತ್ತಿತರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಳಾ ವೆಂ. ನಾಯ್ಕ ಸ್ವಾಗತಿಸಿದರು. ಸ್ಟಾರ್ ಚಾಯ್ಸ್ ತಂಡದ ಸದಸ್ಯೆ ಎಲ್. ತ್ರಿವೇಣಿ ನಿರೂಪಿಸಿ, ವಂದಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 