ಕೃಷಿ ಪತ್ತಿನ ಸಹಕಾರ ಸಂಘದ ಸಭೆ
Agricultural Credit Cooperative Society Meeting
ಕಂಪ್ಲಿ 18: ಕೆಸಿಸಿ ಮತ್ತು ಬಿಡಿಪಿ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡಿ, ಸಂಘದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಬಿಡಿಸಿಸಿ ಬ್ಯಾಂಕ್ ಜಿಲ್ಲಾ ನಿರ್ದೇಶಕ ಮತ್ತು ಸಂಘದ ಹಾಲಿ ನಿರ್ದೇಶಕ ಪಿ.ಮೂಕಯ್ಯಸ್ವಾಮಿ ಹೇಳಿದರು.
ತಾಲೂಕಿನ ಸಣಾಪುರ ಗ್ರಾಮದ ನಾರಾಯಣಸ್ವಾಮಿ ಕ್ಯಾಂಪ್ ಬಳಿಯಲ್ಲಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಸಂಘದ ಅಧ್ಯಕ್ಷ ಕೆ.ವೆಂಕಟರಾಮರಾಜು ಅಧ್ಯಕ್ಷತೆಯಲ್ಲಿ ಗುರುವಾರ ಆಯೋಜಿಸಿದ್ದ 7ನೇ ವಾರ್ಷಿಕ ಮಹಾಜನ ಸಭೆ ಉದ್ಘಾಟಿಸಿ ಮಾತನಾಡಿ, ಸಹಕಾರ ಸಂಘ ಸ್ಥಾಪಿಸಿ, ಈಗ ಏಳನೇ ವರ್ಷಕ್ಕೆ ಕಾಲಿಟ್ಟಿದೆ. ಕೆಲವೊಂದು ಹಳೆಯ ಸಂಘಗಳು ಸಾಲದಲ್ಲಿ ಕೈತೊಳೆಯುವ ಮಧ್ಯದಲ್ಲಿ ನಮ್ಮ ಸಂಘವು ಸ್ಥಾಪನೆಗೊಂಡು ಕೆಲ ವರ್ಷದಲ್ಲೇ ಅಭಿವೃದ್ಧಿಯ ಹೆಜ್ಜೆ ಇಟ್ಟಿದೆ. ಈಗಾಗಲೇ ಸಹಕಾರ ಸಂಘದಿಂದ ರೈತರಿಗೆ ಸಮರ್ಕವಾಗಿ ಸಾಲದ ಯೋಜನೆಗಳನ್ನು ನೀಡಲಾಗುತ್ತಿದೆ. ಮುಂದಿನ ದಿನದಲ್ಲಿ ಗೋದಾಮು ನಿರ್ಮಿಸಲಾಗುವುದು ಎಂದರು.
ಮುಖ್ಯಕಾರ್ಯನಿರ್ವಾಹಕ ಎ.ಶಿವಕುಮಾರ ವಾರ್ಷಿಕ ವರದಿಯೊಂದಿಗೆ ಮಾತನಾಡಿದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 