ಕೃಷಿ ಇಲಾಖೆಯಿಂದ ಬಿತ್ತನೆ ಬೀಜ ಪೂರೈಕೆಗೆ ಕ್ರಮ
Agriculture Department takes action to supply sowing seeds
ಬಳ್ಳಾರಿ 26: ಜಿಲ್ಲೆಯಲ್ಲಿ ಈ ಬಾರಿ ಮುಂಗಾರು ಪೂರ್ವದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕೃಷಿ ಚಟುವಟಿಕೆಗಳು ಚುರುಕು ಪಡೆದುಕೊಂಡಿವೆ. ಮಳೆಯು ರೈತ ಸಮುದಾಯದಲ್ಲಿ ಮಂದಹಾಸ ಮೂಡಿಸಿದೆ. ಇದಕ್ಕೆ ಪೂರಕವಾಗಿ ಕೃಷಿ ಇಲಾಖೆಯು ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ಪೂರೈಸಲು ಸಜ್ಜಾಗಿದೆ.ಉತ್ತಮ ಮಳೆ ಹಿನ್ನಲೆ ರೈತರು ಕೃಷಿ ಭೂಮಿ ಹದಗೊಳಿಸುವ ಕಾರ್ಯಗಳಲ್ಲಿ ತೊಡಗಿದ್ದಾರೆ. ರಂಟೆ-ಕುಂಟೆ ಹೊಡೆಯುವುದು, ರೋಟವೇಟರ್, ಎತ್ತುಗಳ ನೇಗಲು ಹೊಡೆಯುತ್ತಿದ್ದಾರೆ.
ಜಿಲ್ಲೆಯಲ್ಲಿ ವಾರ್ಷಿಕ 599.5 ಮಿ.ಮೀ ವಾಡಿಕೆ ಮಳೆಯಿದ್ದು, ಕಳೆದ ವರ್ಷ ಮೇ 20 ರವರೆಗೆ 53.6 ಮಿ.ಮೀ ಮಳೆಯಾಗಿದೆ. ಪ್ರಸ್ತುತ ವರ್ಷ 88.4 ಮಿ.ಮೀ ಮಳೆಯಾಗಿ ಸುಮಾರು ಶೇ.64 ರಷ್ಟು ಮಳೆ ಹೆಚ್ಚಾಗಿ ಸುರಿದಿದೆ.
ಮುಂಗಾರು ಹಂಗಾಮಿಗೆ ಜಿಲ್ಲೆಯಲ್ಲಿ 1,63,753 ಹೆಕ್ಟೇರ್ ಪ್ರದೇಶ ಬಿತ್ತನೆಯಾಗುವ ಗುರಿ ಹೊಂದಿದ್ದು, ಭತ್ತ 89,000 ಹೆ., ಮೆಕ್ಕೆಜೋಳ 20,000 ಹೆ., ಹತ್ತಿ 35,000 ಹೆ., ತೊಗರಿ 4,500 ಹೆ., ಜೋಳ 5,000 ಹೆ., ಶೇಂಗ 2,500 ಹೆ., ತೃಣಧಾನ್ಯಗಳು 2,300 ಹೆ., ಸೂರ್ಯಕಾಂತಿ 1,000 ಹೆ., ಮತ್ತು ಕಬ್ಬು 1000 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗುವ ನೀರೀಕ್ಷೆ ಹೊಂದಲಾಗಿದೆ.
ಕೃಷಿ ಇಲಾಖೆ ಜಿಲ್ಲೆಯ 13 ರೈತ ಸಂಪರ್ಕ ಕೇಂದ್ರ ಮತ್ತು 02 ಹೆಚ್ಚುವರಿ ಕೇಂದ್ರ ಸೇರಿ ಒಟ್ಟು 15 ಕೇಂದ್ರಗಳ ಮೂಲಕ ವಿವಿಧ ಬೆಳೆಯ ಬಿತ್ತನೆ ಬೀಜಗಳನ್ನು ಸಹಾಯಧನದಡಿ ವಿತರಿಸಲು ವ್ಯವಸ್ಥೆ ಮಾಡಿಕೊಂಡಿದೆ.ಜಿಲ್ಲೆಯಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರದ ದಾಸ್ತಾನು ಸಮರ್ಕವಾಗಿದ್ದು, ರೈತರು ಬಿತ್ತನೆ ಬೀಜ ಮತ್ತು ರಸಗೊಬ್ಬರಗಳ ಆಭಾವದ ಬಗ್ಗೆ ಯಾವುದೇ ಅತಂಕಕ್ಕೆ ಒಳಗಾಗುವ ಅಗತ್ಯವಿಲ್ಲ.ಮುಂಗಾರು ಹಂಗಾಮಿಗೆ ಒಟ್ಟು 1,08,100 ಮೆಟ್ರಿಕ್ ಟನ್ ರಸಗೊಬ್ಬರ ಬೇಡಿಕೆಯಿದ್ದು, ಪ್ರಸ್ತುತ 40,228 ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನಿದೆ. ಹಂತ ಹಂತವಾಗಿ ಬೇಡಿಕೆ ಅನುಗುಣವಾಗಿ ಉಳಿದ ರಸಗೂಬ್ಬರ ಕಾಲಕಾಲಕ್ಕೆ ಸರಬರಾಜು ಆಗಲಿದೆ. ಜಿಲ್ಲೆಗೆ ಮುಂಗಾರು ಹಂಗಾಮಿನಲ್ಲಿ ಒಟ್ಟು 11766 ಕ್ವಿಂಟಾಲ್ ಬಿತ್ತನೆ ಬೀಜದ ಬೇಡಿಕೆ ಇದ್ದು, 11800 ಕ್ವಿಂಟಾಲ್ ಲಭ್ಯವಿದೆ.ಜಿಲ್ಲೆಯಲ್ಲಿ ಕೃಷಿ ಪರಿಕರಗಳ ಪರೀವೀಕ್ಷರ ತಂಡಗಳನ್ನು ರಚಿಸಿ ಬಿತ್ತನೆ ಬೀಜ, ರಸಗೊಬ್ಬರ ಮತ್ತು ಕೀಟನಾಶಕಗಳ ಗುಣಮಟ್ಟ ಹಾಗೂ ಬೆಲೆ ನಿಯಂತ್ರಣಕ್ಕೆ ಕ್ರಮವಹಿಸಲಾಗಿದೆ.ಕೃಷಿ ಪರಿಕರ ಮಾರಾಟಗಾರರು ಗುಣಮಟ್ಟದ ಬಿತ್ತನೆ ಬೀಜ, ರಸಗೊಬ್ಬರ ಮತ್ತು ಕೀಟನಾಶಕಗಳನ್ನೇ ಮಾರಾಟ ಮಾಡಬೇಕು ತಪ್ಪಿದಲ್ಲಿ ಕಾನೂನು ರೀತ್ಯ ಕಠಿಣ ಕ್ರಮ ಜರುಗಿಸಲಾಗುವುದು.*ರಸಗೊಬ್ಬರ ಬೇಡಿಕೆ (ಏಪ್ರಿಲ್ ನಿಂದ ಸೆಪ್ಟೆಂಬರ್ ವರೆಗೆ) ಮತ್ತು ದಾಸ್ತಾನು (ಮೇ 20 ರಂತೆ):*
ಡಿಎಪಿ: 15,237 ಮೆಟ್ರಿಕ್ ಟನ್ ಬೇಡಿಕೆ ಇದ್ದು, 2735.9 ಮೆಟ್ರಿಕ್ ಟನ್ ದಾಸ್ತಾನಿದೆ.
ಎಂಒಪಿ: 2,293 ಮೆಟ್ರಿಕ್ ಟನ್ ಬೇಡಿಕೆ ಇದ್ದು, 2615.2 ಮೆಟ್ರಿಕ್ ಟನ್ ದಾಸ್ತಾನಿದೆ.
ಕಾಂಪ್ಲೆಕ್ಸ್: 45,580 ಮೆಟ್ರಿಕ್ ಟನ್ ಬೇಡಿಕೆ ಇದ್ದು, 20880.9 ಮೆಟ್ರಿಕ್ ಟನ್ ದಾಸ್ತಾನಿದೆ.
ಯೂರಿಯಾ: 44,350 ಮೆಟ್ರಿಕ್ ಟನ್ ಬೇಡಿಕೆ ಇದ್ದು, 13,491.8 ಮೆಟ್ರಿಕ್ ಟನ್ ದಾಸ್ತಾನಿದೆ.
ಎಸ್‌ಎಸ್‌ಪಿ: 542 ಮೆಟ್ರಿಕ್ ಟನ್ ಬೇಡಿಕೆ ಇದ್ದು, 504.2 ಮೆಟ್ರಿಕ್ ಟನ್ ದಾಸ್ತಾನಿದೆ.
ಒಟ್ಟು: 1,08,102 ಮೆಟ್ರಿಕ್ ಟನ್ ಬೇಡಿಕೆ ಇದ್ದು, 40228.3 ಮೆಟ್ರಿಕ್ ಟನ್ ದಾಸ್ತಾನಿದೆ.
*ಬಿತ್ತನೆ ಬೀಜ ಬೇಡಿಕೆ ಮತ್ತು ದಾಸ್ತಾನು:*
ಭತ್ತ: 4,000 ಕ್ವಿಂಟಾಲ್ ಬೇಡಿಕೆ ಇದ್ದು, 4,300 ಕ್ವಿಂಟಾಲ್ ದಾಸ್ತಾನಿದೆ.
ಮೆಕ್ಕೆಜೋಳ: 3,600 ಕ್ವಿಂಟಾಲ್ ಬೇಡಿಕೆ ಇದ್ದು, 4,000 ಕ್ವಿಂಟಾಲ್ ದಾಸ್ತಾನಿದೆ.
ತೊಗರಿ: 660 ಕ್ವಿಂಟಾಲ್ ಬೇಡಿಕೆ ಇದ್ದು, 660 ಕ್ವಿಂಟಾಲ್ ದಾಸ್ತಾನಿದೆ.
ನೆಲಕಡಲೆ: 2,800 ಕ್ವಿಂಟಾಲ್ ಬೇಡಿಕೆ ಇದ್ದು, 3,000 ಕ್ವಿಂಟಾಲ್ ದಾಸ್ತಾನಿದೆ.ಜೋಳ: 210 ಕ್ವಿಂಟಾಲ್ ಬೇಡಿಕೆ ಇದ್ದು, 210 ಕ್ವಿಂಟಾಲ್ ದಾಸ್ತಾನಿದೆ.
ಒಟ್ಟು 11,766 ಕ್ವಿಂಟಾಲ್ ಬೇಡಿಕೆ ಇದ್ದು, 11,800 ಕ್ವಿಂಟಾಲ್ ದಾಸ್ತಾನಿದೆ.ರೈತರು ಅಧಿಕೃತ ಪರಿಕರ ಮಾರಾಟಗಾರರಿಂದಲೇ ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ ಮತ್ತು ಇತರೆ ಕೃಷಿ ಪರಿಕರಗಳನ್ನು ಖರೀದಿಸಬೇಕು.
- ಟಿ.ಸೋಮಸುಂದರ್, ಜಂಟಿ ಕೃಷಿ ನಿರ್ದೇಶಕ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 