ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಮನೋಸ್ಥೈರ್ಯ ತುಂಬಿದ ಕೃಷಿ ಸಚಿವ ಬಿ.ಸಿ.ಪಾಟೀಲ್
ಹಿರೇಕೆರೂರು, ಜೂನ್ 29: ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಇಂದು ಹಿರೇಕೆರೂರಿನ ಕೆ.ಎಸ್.ಪಾಟೀಲ್ ವಿದ್ಯಾಸಂಸ್ಥೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.ಪರೀಕ್ಷಾ ಕೊಠಡಿಗಳು, ಸಾಮಾಜಿಕ ಅಂತರ ಪರಿಶೀಲಿಸಿದ ಸಚಿವರು ಮಕ್ಕಳಲ್ಲಿ ಮನೋಸ್ಥೈರ್ಯ ತುಂಬುವ ಕೆಲಸ ಮಾಡಿದರು.ಯಾವುದೇ ಮಕ್ಕಳು ಕೋವಿಡ್‌ನಿಂದ ಭಯಪಡಬಾರದು. ಧೈರ್ಯವಾಗಿ ಪರೀಕ್ಷೆ ಎದುರಿಸಬೇಕು.
ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆ ಬರೆಯಬೇಕು. ಒಂದು ವೇಳೆ ವಿದ್ಯಾರ್ಥಿಗಳಲ್ಲಿ ಏನಾದರೂ ಆರೋಗ್ಯದ ಸಮಸ್ಯೆ ಕಂಡುಬಂದಲ್ಲಿ ಮೇಲ್ವಿಚಾರಕರು ಅಧಿಕಾರಿಗಳ ಗಮನಕ್ಕೆ ತರಬೇಕು. ಮಕ್ಕಳು ಸಹ ಮೇಲ್ವಿಚಾರಕರಿಗೆ ತಿಳಿಸಬೇಕು ಎಂದರು.ವಿದ್ಯಾರ್ಥಿಗಳು ಅಂಜದೇ ಹೆದರದೇ ಧೈರ್ಯವಾಗಿ ಪರೀಕ್ಷೆ ಬರೆಯಬೇಕು. ಪರೀಕ್ಷೆ ಮುಗಿದ ಬಳಿಕ ಗುಂಪಾಗಿ ಓಡಾಡುವುದಾಗಲೀ ಒಂದೆಡೆ ಸೇರುವುದಾಗಲೀ ಮಾಡಬಾರದು. ನೇರವಾಗಿ ತಮ್ಮ ನಿವಾಸಗಳಿಗೆ ಅಥವಾ ತಂಗಿರುವ ಸ್ಥಳಗಳಿಗೆ ಸಾಮಾಜಿಕ ಅಂತರದಲ್ಲಿಯೇ ತೆರಳಬೇಕು. ಪರೀಕ್ಷಾ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಬೇಕು. ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕೆಂದು ಎಂದು ಸೂಚಿಸಿ, ವಿದ್ಯಾರ್ಥಿಗಳಿಗೆ ಶುಭಕೋರಿದರು.
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ 