ಅಹ್ಮದಾಬಾದ್ ಏರ್ ಇಂಡಿಯಾ ವಿಮಾನ ದುರಂತ ಪ್ರಕರಣದಲ್ಲಿ ಸಾವಿನ ಸಂಖ್ಯೆ 274ಕ್ಕೆ ಏರಿಕೆ
Ahmedabad Air India plane crash death toll rises to 274
ಅಹ್ಮದಾಬಾದ್ 14: ಗುಜರಾತ್ ನ ಅಹ್ಮದಾಬಾದ್ ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತ ಪ್ರಕರಣದಲ್ಲಿ ಸಾವಿನ ಸಂಖ್ಯೆ 274ಕ್ಕೆ ಏರಿಕೆಯಾಗಿದ್ದು, ಹಾಸ್ಚೆಲ್ ನಲ್ಲಿದ್ದ ವಿದ್ಯಾರ್ಥಿಗಳ ಸಾವಿನ ಸಂಖ್ಯೆಯಲ್ಲೂ ಗಣನೀಯ ಏರಿಕೆಯಾಗಿದೆ.
ಇನ್ನು ಈ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 274ಕ್ಕೆ ಏರಿಕೆಯಾಗಿದ್ದು, ಈ ಪೈಕಿ 241 ಮಂದಿ ವಿಮಾನದಲ್ಲಿದ್ದವರಾಗಿದ್ದರೆ, ಬಾಕಿ 33 ಮಂದಿ ಹೊರಗಿನವರಾಗಿದ್ದಾರೆ. ಈ ಪೈಕಿ ಹಾಸ್ಟೆಲ್ ವಿದ್ಯಾರ್ಥಿಗಳು, 10 ವೈದ್ಯರು ಮತ್ತು ಹಾಸ್ಟೆಲ್ ಅವರಣದಲ್ಲಿದ್ದವರು ಎಂದು ಹೇಳಲಾಗಿದೆ. ಅಂತೆಯೇ ಈ ದುರಂತಲ್ಲಿ ಗಾಯಗೊಂಡಿದ್ದ 24 ಮಂದಿ ವಿದ್ಯಾರ್ಥಿಗಳಿಗೆ ಚಿಕಿತ್ಸೆ ಮುಂದುವರೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಗುಜರಾತ್ನ ಅಹಮದಾಬಾದ್‌ನಿಂದ ಇಂಗ್ಲೆಂಡ್ಗೆ ಹೋಗುತ್ತಿದ್ದ ಏರ್ ಇಂಡಿಯಾ ಎಐ 171 ವಿಮಾನ ಟೇಕ್ ಆಫ್ ಆದ ಕೇವಲ ಐದೇ ನಿಮಿಷದಲ್ಲಿ ಪತನಗೊಂಡಿತು. ವಿಮಾನದಲ್ಲಿ 10 ಸಿಬ್ಬಂದಿ, ಇಬ್ಬರು ಪೈಲಟ್ ಗಳು ಸೇರಿದಂತೆ 242 ಜನರು ಈ ವಿಮಾನದಲ್ಲಿದ್ದರು. ಈ ಪೈಕಿ 241 ಮಂದಿ ಸಾವನ್ನಪ್ಪಿದ್ದಾರೆ.
ವಿಮಾನದಲ್ಲಿ 169 ಭಾರತೀಯರು, 53 ಬ್ರಿಟಿಷ್ ಪ್ರಜೆಗಳು, 7 ಪೋರ್ಚುಗೀಸ್ ಮತ್ತು ಒಬ್ಬ ಕೆನಡಾದ ಪ್ರಯಾಣಿಕ ಇದ್ದರು. ಈ ವಿಮಾನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಇದ್ದ ಬಿಜೆ ವೈದ್ಯಕೀಯ ಕಾಲೇಜು ಹಾಸ್ಟೆಲ್ ಕಟ್ಟಡಕ್ಕೆ ಅಪ್ಪಳಿಸಿ ಸ್ಫೋಟವಾಗಿತ್ತು.
ಈ ವೇಳೆ ಕೇವಲ ವಿಮಾನದೊಳಗಿದ್ದ ಪ್ರಯಾಣಿಕರು ಮಾತ್ರವಲ್ಲದೇ ಹಾಸ್ಟೆಲ್ ನೊಳಗೆ ಆಗಷ್ಟೇ ಊಟಕ್ಕೆ ಕುಳಿತಿದ್ದ ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳು ಕೂಡ ಸ್ಫೋಟದ ತೀವ್ರತೆಯಲ್ಲಿ ಸುಟ್ಟು ಕರಕಲಾದರು.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 