ಅಹಮದಾಬಾದ್ ವಿಮಾನ ದುರಂತ: ಶಾಸಕ ರಾಜುಗೌಡ ದಿಗ್ರಮೆ, ತೀವ್ರ ಸಂತಾಪ
Ahmedabad plane crash: MLA Raju Gowda deep condolences
ದೇವರಹಿಪ್ಪರಗಿ 13: ಗುಜರಾತಿನ ಅಹ್ಮದಾಬಾದ್ ಏರ್ ಪೋರ್ಟ್ ಬಳಿ ನಡೆದ ಘೋರ ವಿಮಾನ ದುರಂತದ ಬಗ್ಗೆ ಶಾಸಕರಾದ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಅವರು ದಿಗ್ಭ್ರಮೆ ವ್ಯಕ್ತಪಡಿಸಿ ಹಾಗೂ ದುರಂತದಲ್ಲಿ ಮಡಿದವರಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ದುರಂತದ ಬಗ್ಗೆ ಮಾಧ್ಯಮ ಹೇಳಿಕೆಯಲ್ಲಿ ಶಾಸಕ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಮಾತನಾಡಿ, ಘನ ಘೋರ ದುರಂತ ಆಗಬಾರದಿತ್ತು. ದುರಂತದಲ್ಲಿ ಮಂಗಳೂರಿನ ಪೈಲಟ್ ಸಹಿತ ಅನೇಕ ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. ಅಹಮದಾಬಾದ್‌ನಿಂದ ಲಂಡನ್‌ಗೆ ಹೊರಟ ದುರಂತಕ್ಕೀಡಾದ ವಿಮಾನದಲ್ಲಿ ಪ್ರಯಾಣಿಕರು ಕೆಲವರು ತಮ್ಮ ಜೀವನದ ದುಡಿಮೆಗಾಗಿ, ಕುಟುಂಬದ ಅವಲಂಬಿಸಿದವರು ತುಂಬಾ ಮಂದಿ ಇದ್ದಾರೆ. ಮಡಿದವರ ಕುಟುಂಬಕ್ಕೆ ಆ ಭಗವಂತನು ಚಿರಶಾಂತಿ ಕರುಣಿಸಲಿ ಎಂದು ಹೇಳಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹಾಗೂ ಸ್ಥಳೀಯ ರಾಜ್ಯ ಸರ್ಕಾರ ಹಾಗೂ ಅಧಿಕಾರಿಗಳು ಈಗಾಗಲೇ ತುರ್ತು ಕಾರ್ಯಾಚರಣೆ ಬಿರುಸಿನಿಂದ ಸಾಗುತ್ತಿದೆ. ನಾಗರಿಕರು ಸಂಯಮದಿಂದ ವರ್ತಿಸಿ ದುರಂತಕ್ಕೀಡಾದ ಕುಟುಂಬಗಳಿಗೆ ಸಾಂತ್ವನ ಹಾಗೂ ಗರಿಷ್ಠ ಪರಿಹಾರ ನೀಡಬೇಕಾಗಿದೆ ಎಂದರು.
ವಿಮಾನ ದುರಂತದಿಂದ ಮಡಿದವರಿಗೆ ಸ್ವಾಮೀಜಿಗಳು, ರಾಜಕೀಯ ಮುಖಂಡರು ಹಾಗೂ ಮತ್ತಿತರರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 