ಐಗಳಿ ಪೊಲೀಸ್ ಠಾಣೆಯ ಎಎಸ್‌ಐ ಶಂಭುಲಿಂಗ್ ಮೇತ್ರಿ ಆತ್ಮಹತ್ಯೆ
ಸಂಬರಗಿ 07: ಐಗಳಿ ಪೊಲೀಸ್ ಠಾಣೆಯ ಎಎಸ್‌ಐ ಶಂಭುಲಿಂಗ್ ಮೇತ್ರಿ (54)ಅವರು ನಿನ್ನೆ ದಿ. 6ರಂದು ತಮ್ಮ ಹುಟ್ಟೂರಾದ ಅನಂತಪುರದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೂಲಗಳ ಪ್ರಕಾರ ಮಾಹಿತಿ ಐಗಳಿ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಂಭುಲಿಂಗ್ ಮೇತ್ರಿ ಅವರಿಗೆ ಹಲವಾರು ದಿನಗಳ ಹಿಂದೆ ಸಂಭವಿಸಿದ ಅಪಘಾತದಲ್ಲಿ ತಲೆಗೆ ಪೆಟ್ಟಾಗಿದ್ದು, ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ನಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶವ ಪರೀಕ್ಷೆ ಬಳಿಕ ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ.