ಐಹೊಳೆ: ಪಾರಂಪರಿಕ ಬೈಕ್ ರ್ಯಾಲಿ
ಬಾಗಲಕೋಟೆ: ಧಾರವಾಡ ವಲಯದ ಭಾರತೀಯ ಪುರಾತತ್ವ ಸವ್ರೇಕ್ಷಣಾ ವತಿಯಿಂದ ವಿಶ್ವ ಪಾರಂಪತಿಕ ಸಪ್ತಾಹ ಅಂಗವಾಗಿ ಐಹೊಳೆ ಪ್ರವಾಸಿ ತಾಣದಲ್ಲಿ ಹಮ್ಮಿಕೊಂಡ ಪಾರಂಪರಿಕ ಬೈಕ್ರ್ಯಾಲಿಗೆ ಬುಧವಾರ ವಿದೇಶಿ ಪ್ರವಾಸಿಗರು ಚಾಲನೆ ನೀಡಿದರು.
ಬೈಕ್ರ್ಯಾಲಿ ಐಹೊಳೆಯ ಕೇಂದ್ರಿಯ ಸಂರಕ್ಷಿತ ಸ್ಮಾರಕಗಳ (ದುರ್ಗಾದೇವಾಲಯ) ಆವರಣದಿಂದ ಪ್ರಾರಂಭವಾಗಿ ಪಟ್ಟದಕಲ್ಲ ಮಾರ್ಗವಾಗಿ ನಂದಿಕೇಶ್ವರ ಗ್ರಾಮಕ್ಕೆ ಮುಕ್ತಾಯಗೊಂಡಿತು. ನಂತರ ನಂದಿಕೇಶ್ವರ ಗ್ರಾಮದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರೊಂದಿಗೆ ಪರಂಪರೆ ಹಾಗೂ ಪ್ರಾಚೀನ ಸ್ಮಾರಕಗಳ ಸಂರಕ್ಷಣೆ ಹಾಗೂ ಅವುಗಳ ಮಹತ್ವ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಹಾಗೂ ವಿದ್ಯಾರ್ಥಿಗಳಿಗೆ ಪರಂಪರೆ ಪ್ರಾಚೀನ ಸ್ಮಾರಕಗಳು ಮತ್ತು ಇತಿಹಾಸ ಕುರಿತಂತೆ ರಸಪ್ರಶ್ನೆ ಕಾರ್ಯಕ್ರಮ ನಡೆಸಿ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಧಾರವಾಡ ವಿಭಾಗದ ಪುರಾತತ್ವ ಇಲಾಖೆಯ ಅಧೀಕ್ಷಕ ಎ.ಅನಿಲಕುಮಾರ, ಅಧೀಕ್ಷಕ ಪುರಾತತ್ವ ಅಭಿಯಂತರ ಜಿ.ಕಾಮರಾಜ, ಸಹಾಯಕ ಪುರಾತತ್ವ ಅಭಿಯಂತರ ತೇಜಸ್ವಿ ಸೇರಿದಂತೆ ಇತರರು ಉಪಸ್ಥಿತರಿದ್ದರು. ನಂತರ ಪಾರಂಪರಿಕ ಬೈಕ್ರ್ಯಾಲಿ ಬಾದಾಮಿಯಲ್ಲಿರುವ ವಸ್ತು ಸಂಗ್ರಹಾಲಯ ಆಗಮಿಸಿ ಕಾರ್ಯಕ್ರಮ ನಡೆಸಲಾಯಿತು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 