ನವದೆಹಲಿ, ಆ 30 ದೇಶಾದ್ಯಂತ 12,500 ಆಯುಷ್ ಕೇಂದ್ರಗಳನ್ನು ಸ್ಥಾಪಿಸುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ ಆಯುಷ್ ಮಂತ್ರಾಲಯ ಶುಕ್ರವಾರ ದೆಹಲಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಯೋಗ ಅಭಿವೃದ್ಧಿಗೆ ಕೊಡುಗೆ ಹಾಗೂ ಉತ್ತೇಜನ ನೀಡಿದವರಿಗೆ ಪ್ರಧಾನಿ ಪ್ರಶಸ್ತಿ ವಿತರಿಸಿದ ಬಳಿಕ ಮಾತನಾಡಿದ ಪ್ರಧಾನಿ, ದೇಶದಲ್ಲಿ ಆಯುಷ್ ಕೇಂದ್ರಗಳ ಸಂಖ್ಯೆ ಹೆಚ್ಚಲಿದೆ ಇನ್ನೂ 12,500 ಕೇಂದ್ರಗಳನ್ನು ಸ್ಥಾಪಿಸುವ ಗುರಿ ಹೊಂದಲಾಗಿದೆ ಎಂದರು ಇದೇ ಸಂದರ್ಭದಲ್ಲಿ ಹರಿಯಾಣದಲ್ಲಿ ಸ್ಥಾಪಿಸಲಾಗಿರುವ 10 ಆಯುಷ್ ಆರೋಗ್ಯ ಮತ್ತು ಕಲ್ಯಾಣ ಕೇಂದ್ರಕ್ಕೆ ಪ್ರಧಾನಿ ಚಾಲನೆ ನೀಡಿದರು ಈ ವರ್ಷ 4 ಸಾವಿರ ಆಯುಷ್ ಕೇಂದ್ರಗಳನ್ನು ತೆರೆಯಲು ಸರ್ಕಾರ ಪ್ರಯತ್ನಿಸುತ್ತದೆ ಆಯುಷ್ ಮತ್ತು ಯೋಗ ಫಿಟ್ ಇಂಡಿಯಾ ಮೂವ್ ಮೆಂಟ್ ನ ಎರಡು ಆಧಾರ ಸ್ತಂಭಗಳು ಎಂದು ಪ್ರಧಾನಿ ತಿಳಿಸಿದರು. ಎರಡು ದಿನಗಳ ಹಿಂದಷ್ಟೇ, ದೇಶಾದ್ಯಂತ 75 ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಿದ್ದ ಪ್ರಧಾನಿ ಮೋದಿ, ತನ್ಮೂಲಕ 16 ಸಾವಿರ ಎಂಬಿಬಿಎಸ್ ಸೀಟುಗಳನ್ನು ಸೃಷ್ಟಿಸಲಾಗುವುದು ಎಂದಿದ್ದರು.