242 ಜನರಿದ್ದ ಏರ್ ಇಂಡಿಯಾ ವಿಮಾನ 'AI–171' ಪತನ: ಹಲವರ ಸಾವಿನ ಶಂಕೆ
Air India flight 'AI-171' with 242 people on board crashes
ಅಹಮದಾಬಾದ್: ಗುಜರಾತ್‌ನ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಟೇಕ್ ಆಫ್ ಆದ ಕೆಲವೇ ಹೊತ್ತಿನಲ್ಲಿ ಏರ್ ಇಂಡಿಯಾ ವಿಮಾನ 'AI–171' ಪತನವಾಗಿದೆ.
ಗುಜರಾತ್ ರಾಜಧಾನಿ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಮಧ್ಯಾಹ್ನ 1 ರಿಂದ 2 ಗಂಟೆಯ ನಡುವೆ ಘಟನೆ ಸಂಭವಿಸಿದೆ. ವಿಮಾನ ಅಪಘಾತಕ್ಕೀಡಾಗಿದ್ದು, ಇಡೀ ವಿಮಾನ ನಿಲ್ದಾಣದಾದ್ಯಂತ ದಟ್ಟ ಹೊಗೆ ಆವರಿಸಿದೆ.
ಏರ್ಪೋರ್ಟ್ ಬಳಿ ಮೇಧಿನಿ ನಗರ್ನಲ್ಲಿ ಈ ಘಟನೆ ಸಂಭವಿಸಿದೆ. ವಿಮಾನವು 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಸೇರಿದಂತೆ 242 ಜನರೊಂದಿಗೆ ಲಂಡನ್‌ಗೆ ತೆರಳುತ್ತಿತ್ತು. ವಿಮಾನವು ನಗರದ ವಿಮಾನ ನಿಲ್ದಾಣದಿಂದ ಸ್ವಲ್ಪ ದೂರದಲ್ಲಿರುವ ಫೋರೆನ್ಸಿಕ್ ಕ್ರಾಸ್ ರಸ್ತೆಯ ಬಳಿ ಪತನಗೊಂಡಿತು ಎನ್ನಲಾಗಿದೆ.
ಟೇಕ್ ಆಫ್ ಆಗುತ್ತಿದ್ದಂತೆ ವಿಮಾನ ಪತನವಾಗಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳ ಧಾವಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ವಿಮಾನದಲ್ಲಿದ್ದ ಪ್ರಯಾಣಿಕರ ಪೈಕಿ ಹಲವರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಆದರೆ ಅಧಿಕಾರಿಗಳು ಇನ್ನೂ ವಿವರಗಳನ್ನು ನೀಡಿಲ್ಲ.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 