ವಿದ್ಯುತ್ ಚಾಲಿತ ವಾಹನ ಬಳಕೆಯಿಂದ ವಾಯುಮಾಲಿನ್ಯ ತಡೆಗಟ್ಟಬಹುದು: ವಿನಾಯಕ

ಹಾವೇರಿ: ವಾಹನಗಳಲ್ಲಿ ಕಲಬೆರಕೆ ಇಂಧನವನ್ನು ಬಳಸಬಾರದು ಹಾಗೂ ವಿದ್ಯುತ್ ಚಾಲಿತ ವಾಹನಗಳ ಬಳಕೆಯಿಂದ ವಾಯುಮಾಲಿನ್ಯ ತಡೆಗಟ್ಟಬಹುದು  ಎಂದು ಮೋಟಾರು ವಾಹನ ನಿರೀಕ್ಷಕ ವಿನಾಯಕ ನಾಯಕ ಹೇಳಿದರು. 

ನಗರದ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಆವರಣದಲ್ಲಿ ಇತ್ತೀಚಿಗೆ ನಡೆದ  ನವಂಬರ್-2019ರ ಮಾಹೆಯ ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ ಅಂಗವಾಗಿ ಆಯೋಜಿಸಿದ್ದ ವಾಹನ ಚಾಲಕರಿಗೆ ಹಾಗೂ ವಾಹನ ಮಾಲೀಕರಿಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಾಹನಗಳ ಮಾಲೀಕರು ತಮ್ಮ ವಾಹನಗಳನ್ನು ಸುಸ್ಥಿತಿಯಲ್ಲಿರಿಸಿಕೊಳ್ಳಬೇಕು. ಕಾಲಕಾಲಕ್ಕೆ ವಾಹನಗಳನ್ನು ವಾಯುಮಾಲಿನ್ಯ ಕೇಂದ್ರಗಳಲ್ಲಿ ತಪಾಸಣೆ ಮಾಡಿಸಿ ಪ್ರಮಾಣಪತ್ರವನ್ನು ಪಡೆದುಕೊಳ್ಳಬೇಕು. ಸಮೂಹ ಸಾರಿಗೆ ಬಳಸಿ ವಾಯುಮಾಲಿನ್ಯವನ್ನು ನಿಯಂತ್ರಿಸಬಹುದು. ಪರಿಸರ ಸಂರಕ್ಷಣೆಯು ನಮ್ಮೆಲ್ಲರ ಹೊಣೆಯಾಗಿದ್ದು, ಎಲ್ಲರೂ ಈ ಬಗ್ಗೆ ಗಮನಹರಿಸಿ ಹೆಚ್ಚು ಹೆಚ್ಚು ಗಿಡಮರಗಳನ್ನು ಬೆಳಸಿ ವಾಯುಮಾಲಿನ್ಯ ತಡೆಗಟ್ಟಲು ಪ್ರಯತ್ನಿಸೋಣ ಎಂದು ಹೇಳಿದರು. 

ಕಾರ್ಯಕ್ರಮದಲ್ಲಿ ಕಚೇರಿ ಅಧೀಕ್ಷಕರಾದ ರಮೇಶ ದೊಡ್ಡಮನಿ ಹಾಗೂ ಸತೀಶ ವೈ. ಆರ್, ಸಿಬ್ಬಂದಿ ಶ್ರೀಪಾದ ಬ್ಯಾಳಿಯವರ, ಗುರುಮೂತರ್ಿ ತೆಂಬದ, ಅಕ್ಷಯಕುಮಾರ ಸಂಕಮ್ಮನವರ ಹಾಗೂ ಮತ್ತಿತರರು ಉಪಸ್ಥಿತರಿದ್ದರು